Home namma chikmagalur chikamagalur ಎಪಿಕೆ ಫೈಲ್ ಡೌನ್‌ಲೋಡ್ – ಖಾತೆಯಿಂದ ₹1.27 ಲಕ್ಷ ವಂಚನೆ
chikamagalurHomeLatest Newsnamma chikmagalur

ಎಪಿಕೆ ಫೈಲ್ ಡೌನ್‌ಲೋಡ್ – ಖಾತೆಯಿಂದ ₹1.27 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಮೊಬೈಲ್‌ಗೆ ಅಪರಿಚಿತ ಎಪಿಕೆ (APK) ಫೈಲ್ ಡೌನ್‌ಲೋಡ್ ಆಗುವ ಮೂಲಕ ವೈಯಕ್ತಿಕ ಬ್ಯಾಂಕಿಂಗ್ ವಿವರಗಳನ್ನು ಕದ್ದು, ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು ₹1,27,999 ಹಣವನ್ನು ವರ್ಗಾವಣೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳಸ ಮೂಲದ 69 ವರ್ಷದ ಕರುಣಾಕರ ಎಂ.ಸಿ. ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಕಳಸದಲ್ಲಿರುವ ಕರ್ನಾಟಕ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್‌ನಲ್ಲಿ ಅವರು ಖಾತೆ ಹೊಂದಿದ್ದು, ಎರಡೂ ಖಾತೆಗಳಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದ್ದರು.

ಆಗಸ್ಟ್ 17ರಂದು ಕರ್ನಾಟಕ ಬ್ಯಾಂಕ್ ಖಾತೆಯಿಂದ ₹99,999 ಡೆಬಿಟ್ ಆಗಿರುವ ಕುರಿತು ಮೊಬೈಲ್‌ಗೆ ಸಂದೇಶ ಬಂದಿದ್ದು, ತಮ್ಮ ಗಮನಕ್ಕೆ ಬಾರದಂತೆ ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ಕೂಡಲೇ ಬ್ಯಾಂಕ್‌ಗೆ ಕರೆ ಮಾಡಿ ಖಾತೆಯನ್ನು ಡೆಬಿಟ್ ಫ್ರೀಜ್ ಮಾಡಿಸಿದ್ದಾರೆ.

ನಂತರ ಕೆನರಾ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಆಗಸ್ಟ್ 18ರಂದು ₹28,000 ಹಣವನ್ನು ತಮ್ಮ ಗಮನಕ್ಕೆ ಬಾರದಂತೆ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ತಮ್ಮ ಮೊಬೈಲ್‌ನಲ್ಲಿ ಯಾರೋ ಅಪರಿಚಿತ APK ಫೈಲ್ ಡೌನ್‌ಲೋಡ್ ಮಾಡಿಸಿರುವ ಮೂಲಕ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು ಹಣ ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ವಂಚನೆ ಕುರಿತು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ಎರಡು ದೂರುಗಳನ್ನು ದಾಖಲಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 45/2026ನೇ ಪ್ರಕರಣ ದಾಖಲಾಗಿದ್ದು, ಐಟಿ ಕಾಯ್ದೆಯ ಕಲಂ 66(C), 66(D) ಹಾಗೂ ಬಿಎನ್‌ಎಸ್ ಕಲಂ 318(4) ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿದೆ

₹1.27 lakh fraud from bank account by downloading APK file

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ ಆರ್‌ಸಿಸಿ ಬಾಕ್ಸ್ ಕಾಮಗಾರಿಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳುತ್ತಿರುವುದರಿಂದ ಚಿಕ್ಕಮಗಳೂರು...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ...

Related Articles

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ...

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ...

ರಾಜ್ಯಾದ್ಯಂತ ಆಗಸ್ಟ್ 26 ರಿಂದ ಸೀರತ್ ಅಭಿಯಾನ

ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್...

3 ಟನ್ ಕಬ್ಬಿಣದ ಸರಳು ಕಳವು

ಚಿಕ್ಕಮಗಳೂರು: ನಿರ್ಮಾಣ ಹಂತದಲ್ಲಿದ್ದ ಅಂಬೇಡ್ಕರ್ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್...