Home namma chikmagalur chikamagalur ಬೀರೂರಿನಲ್ಲಿ ನೋಟು ಬದಲಾವಣೆ ನೆಪದಲ್ಲಿ ₹12 ಲಕ್ಷ ವಂಚನೆ
chikamagalurCrime NewsHomeLatest Newsnamma chikmagalur

ಬೀರೂರಿನಲ್ಲಿ ನೋಟು ಬದಲಾವಣೆ ನೆಪದಲ್ಲಿ ₹12 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ₹500 ಮುಖಬೆಲೆಯ ನೋಟುಗಳಿಗೆ ಬದಲಾಗಿ ₹100 ಮುಖಬೆಲೆಯ ನೋಟುಗಳಲ್ಲಿ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿ ₹12 ಲಕ್ಷ ನಗದು ಪಡೆದು ಪರಾರಿಯಾದ ಆರೋಪದಡಿ ಬೀರೂರು ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಸಿವಿಲ್ ಕಂಟ್ರಾಕ್ಟರ್ ಸಂತೋಷ್ ಚಬನೂರು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಐದು ದಿನಗಳ ಹಿಂದೆ ತಮ್ಮ ಸಂಬಂಧಿಕ ನೀಲಕಂಠ ಚಬನೂರು ಅವರ ಮೂಲಕ ಸಂತೋಷ್ ಎಂಬಾತನ ಪರಿಚಯವಾಗಿದ್ದು, ₹500 ಮುಖಬೆಲೆಯ ನೋಟುಗಳನ್ನು ನೀಡಿದರೆ ₹100 ಮುಖಬೆಲೆಯ ನೋಟುಗಳಲ್ಲಿ ಹೆಚ್ಚಿನ ಹಣ ನೀಡುವುದಾಗಿ ಆಮಿಷವೊಡ್ಡಿದ್ದಾನೆ. ತಮ್ಮ ಬಳಿ ಇದ್ದ ₹12 ಲಕ್ಷಕ್ಕೆ ₹20 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾನೆ ಎನ್ನಲಾಗಿದೆ.

ಇದನ್ನು ನಂಬಿದ ಸಂತೋಷ್ ಚಬನೂರು ಅವರು ಸ್ನೇಹಿತ ಸುರೇಶ್ ಪಾಟೀಲ ಅವರೊಂದಿಗೆ ₹12 ಲಕ್ಷ ನಗದು ತೆಗೆದುಕೊಂಡು ಆಗಸ್ಟ್ 1ರಂದು ಬೀರೂರಿಗೆ ಬಂದಿದ್ದಾರೆ. ಬೀರೂರು ಬಸ್ ನಿಲ್ದಾಣದ ಬಳಿ ಸಂತೋಷ್ ಎಂಬಾತ ಕಾರಿಗೆ ಹತ್ತಿಕೊಂಡು, ತರೀಕೆರೆ ಕಡೆ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋರಿತಿಮ್ಮನಹಳ್ಳಿ ಗ್ರಾಮದ ಎರಡನೇ ಸೇತುವೆ ಬಳಿ ಕರೆದುಕೊಂಡು ಹೋಗಿದ್ದಾನೆ.

ಈ ವೇಳೆ ಹಿಂಬದಿಯಿಂದ ಬಂದ ಬಿಳಿ ಬಣ್ಣದ ಬೊಲೆರೊ ಜೀಪಿನಲ್ಲಿದ್ದ ಐವರು ವ್ಯಕ್ತಿಗಳನ್ನು ತನ್ನ ಸ್ನೇಹಿತರು ಎಂದು ಪರಿಚಯಿಸಿದ ಸಂತೋಷ್, ಅವರೊಂದಿಗೆ ಸೇರಿ ₹12 ಲಕ್ಷ ನಗದನ್ನು ಪಡೆದುಕೊಂಡಿದ್ದಾರೆ. ಬಳಿಕ ₹20 ಲಕ್ಷ ಮೌಲ್ಯದ ₹100 ಮುಖಬೆಲೆಯ ನೋಟುಗಳನ್ನು ತಂದುಕೊಡುವುದಾಗಿ ಹೇಳಿ ಅಲ್ಲಿಂದ ತೆರಳಿದ್ದಾರೆ.

ಸಂಜೆಯಾದರೂ ಅವರು ಮರಳಿ ಬಾರದೇ ಇದ್ದಾಗ ಸಂತೋಷ್‌ಗೆ ಕರೆ ಮಾಡಿದರೂ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ತಾವು ಮೋಸ ಹೋಗಿರುವುದು ತಿಳಿದು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಚರ್ಚಿಸಿ ಆಗಸ್ಟ್ 4ರಂದು ಬೀರೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಸಂತೋಷ್ ಹಾಗೂ ಆತನ ಐವರು ಸಹಚರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಅಡಿ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

₹12 lakh fraud on the pretext of exchanging currency in Birur

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...