Home namma chikmagalur chikamagalur ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿ ₹2.34 ಲಕ್ಷ ವಂಚನೆ
chikamagalurHomeLatest Newsnamma chikmagalur

ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿ ₹2.34 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹2.34 ಲಕ್ಷಕ್ಕೂ ಅಧಿಕ ಹಣವನ್ನು ವಿವಿಧ ಶುಲ್ಕಗಳ ಹೆಸರಿನಲ್ಲಿ ಪಡೆದು ಸೈಬರ್ ವಂಚನೆ ಮಾಡಿರುವ ಘಟನೆ ನಡೆದಿದೆ. ನಗರದ ಹರಿಯಪ್ಪ ಸ್ಟ್ರೀಟ್, ಎಂಜಿ ರಸ್ತೆಯ ನಿವಾಸಿ ಸೀಮಾ ಬಾನು ವಂಚನೆಗೊಳಗಾದವರು. ಈ ಸಂಬಂಧ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಜುಲೈ 20ರಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸೀಮಾ ಬಾನು ಅವರ ಮೊಬೈಲ್‌ಗೆ ಕರೆ ಮಾಡಿ, ತಾನು ಕೇರಳ ಲಾಟರಿ ಕಡೆಯಿಂದ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾನೆ. ಲಾಟರಿ ಖರೀದಿಸುವಂತೆ ತಿಳಿಸಿ, ವಾಟ್ಸ್‌ಆ್ಯಪ್ ಮೂಲಕ ಸುಮಾರು 30 ಲಾಟರಿ ಸಂಖ್ಯೆಗಳ ಮಾಹಿತಿಯನ್ನು ಕಳುಹಿಸಿದ್ದಾನೆ. ಇದರಲ್ಲಿ KL336699 ಸಂಖ್ಯೆಯನ್ನು ಆಯ್ಕೆ ಮಾಡಿಕೊಂಡ ಸೀಮಾ ಬಾನು, ಟಿಕೆಟ್ ಶುಲ್ಕವೆಂದು ₹99 ಪಾವತಿಸಿದ್ದಾರೆ.

ನಂತರ ಅದೇ ದಿನ ಮಧ್ಯಾಹ್ನ ಕರೆ ಮಾಡಿದ ಆರೋಪಿಗಳು, ಲಾಟರಿ ಡ್ರಾ ನಡೆದಿದ್ದು ₹8 ಲಕ್ಷ ಬಹುಮಾನ ಬಂದಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಲಿಂಕ್ ಕಳುಹಿಸಿ ಗೂಗಲ್‌ನಲ್ಲಿ ಪರಿಶೀಲಿಸುವಂತೆ ಸೂಚಿಸಿದ್ದಾರೆ. ಲಿಂಕ್‌ನಲ್ಲಿ ₹8 ಲಕ್ಷ ಬಹುಮಾನ ಬಂದಿರುವುದಾಗಿ ತೋರಿಸಿದ್ದರಿಂದ ಸೀಮಾ ಬಾನು ಅದನ್ನು ನಂಬಿದ್ದಾರೆ ಎನ್ನಲಾಗಿದೆ.

ಬಹುಮಾನ ಹಣ ಪಡೆಯಲು ಪ್ರೊಸೆಸಿಂಗ್ ಚಾರ್ಜ್, ಜಿಎಸ್‌ಟಿ, ಟಿಡಿಎಸ್, ಎನ್‌ಒಸಿ ಹಾಗೂ ಆರ್‌ಬಿಐ ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಾವತಿಸುವಂತೆ ಆರೋಪಿಗಳು ಸೂಚಿಸಿದ್ದಾರೆ. ಇದನ್ನು ನಂಬಿದ ಸೀಮಾ ಬಾನು, ಫೋನ್‌ಪೇ ಮೂಲಕ ಆರೋಪಿಗಳು ಕಳುಹಿಸಿದ ಸ್ಕ್ಯಾನರ್‌ಗಳಿಗೆ ವಿವಿಧ ಹಂತಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ.

ಜುಲೈ 21ರಿಂದ 29ರವರೆಗೆ ವಿವಿಧ ದಿನಗಳಲ್ಲಿ ₹8 ಸಾವಿರ, ₹31,500, ₹49,800, ₹35,600, ₹35 ಸಾವಿರ ಸೇರಿದಂತೆ ಹಲವು ಮೊತ್ತಗಳನ್ನು ಪಾವತಿಸಿದ್ದಾರೆ. ಅಲ್ಲದೆ, ಇತರ ಸಂಖ್ಯೆಗಳಿಗೂ ₹17,800 ಹಾಗೂ ₹32 ಸಾವಿರ ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಒಟ್ಟು ₹2,34,200 ಹಣವನ್ನು ವಂಚಕರು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆದರೆ ಯಾವುದೇ ಬಹುಮಾನ ಹಣವನ್ನು ಅವರ ಖಾತೆಗೆ ಜಮಾ ಮಾಡದ ಆರೋಪಿಗಳು, ಮತ್ತಷ್ಟು ₹1 ಲಕ್ಷ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಸೀಮಾ ಬಾನು ಕುಟುಂಬದವರಲ್ಲಿ ವಿಚಾರಿಸಿದಾಗ ತಾವು ವಂಚನೆಗೊಳಗಾಗಿರುವುದು ಗೊತ್ತಾಗಿದೆ.

ತಕ್ಷಣವೇ ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ, ಸ್ವೀಕೃತಿ ಸಂಖ್ಯೆ 31608260135664ರಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಂ ಪೊಲೀಸರು ವಂಚಕರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

₹2.34 lakh fraud by claiming to have won a lottery prize

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...