Home Crime News ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ
Crime NewschikamagalurHomeLatest Newsnamma chikmagalur

ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ

Share
Share
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ₹277 ಕೋಟಿ ದಂಡ ಪಾವತಿಸಿ ಎಂದು ರೆವೆನ್ಯು ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ನಟಿ ರನ್ಯಾ ರಾವ್, ಉದ್ಯಮಿ ತರುಣ್ ಕೊಂಡರಾಜು ಮತ್ತು ಇಬ್ಬರು ಆಭರಣ ವ್ಯಾಪಾರಿಗಳಿಗೆ ನೋಟಿಸ್‌ ನೀಡಿದೆ.

ಈ ನಾಲ್ವರು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14.2 ಕೆ.ಜಿ.ಯಷ್ಟು ಚಿನ್ನ ಕಳ್ಳಸಾಗಣೆ ಮಾಡಿ, ಮಾರ್ಚ್‌ 3 ರಂದು ಡಿಆರ್‌ಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಇವರಲ್ಲಿ ನಟಿ ರನ್ಯಾ ರಾವ್‌ಗೆ ಗರಿಷ್ಠ, ₹102 ಕೋಟಿ ದಂಡ ವಿಧಿಸಲಾಗಿದೆ.

ಚಿನ್ನಕಳ್ಳಸಾಗಣೆಯಲ್ಲಿ ಭಾಗಿಯಾದ ಆರೋಪದಲ್ಲಿ ಉದ್ಯಮಿ ತರುಣ್‌ ಕೊಂಡರಾಜು, ಕಳ್ಳಸಾಗಣೆಯ ಚಿನ್ನ ಮಾರಾಟ ಮಾಡಿದ ಮತ್ತು ಹವಾಲಾ ಮೂಲಕ ಹಣ ಕಳುಹಿಸಿದ ಆರೋಪದಲ್ಲಿ ಆಭರಣ ವ್ಯಾಪಾರಿ ಸಾಹಿಲ್‌ ಸಖಾರಿಯಾ ಜೈನ್‌ ಮತ್ತು ಭರತ್‌ ಕುಮಾರ್‌ ಜೈನ್‌ ಅವರನ್ನು ಡಿಆರ್‌ಐ ಬಂಧಿಸಿತ್ತು. ಇವರೆಲ್ಲ ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಡಿಆರ್‌ಐ ಮುಂಬೈ ವಿಭಾಗದ ಅಧಿಕಾರಿಗಳು ಮಂಗಳವಾರ ಕೇಂದ್ರ ಕಾರಾಗೃಹಕ್ಕೆ ತೆರಳಿ, ನಾಲ್ವರು ಅಪರಾಧಿಗಳಿಗೂ ನೋಟಿಸ್‌ ನೀಡಿದ್ದಾರೆ. ಜತೆಗೆ ಅವರ ವಿರುದ್ಧದ ಆರೋಪಗಳು ಮತ್ತು ಅವುಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ನೋಟಿಸ್‌ನೊಂದಿಗೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

‘2024ರ ನವೆಂಬರ್‌ನಿಂದ 2025ರ ಫೆಬ್ರುವರಿ ನಡುವೆ ರನ್ಯಾ ನಾಲ್ಕು ಬಾರಿ ಚಿನ್ನ ಕಳ್ಳಸಾಗಣೆ ಮಾಡಿದ್ದು, ಒಟ್ಟು 49.6 ಕೆ.ಜಿ.ಯಷ್ಟು ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ತಂದಿದ್ದರು. ಅಷ್ಟೂ ಚಿನ್ನವನ್ನು ಸಾಹಿಲ್‌ ₹40.07 ಕೋಟಿಗೆ ಮಾರಾಟ ಮಾಡಿ, ಅದರಲ್ಲಿ ₹38.35 ಕೋಟಿಯನ್ನು ಹವಾಲಾ ಮೂಲಕ ದುಬೈಗೆ ಕಳುಹಿಸಿದ್ದ. ಚಿನ್ನದ ಮಾರುಕಟ್ಟೆ ಮೌಲ್ಯ, ಆಮದು ತೆರಿಗೆಯನ್ನು ಒಳಗೊಂಡು ದಂಡ ನಿರ್ಧರಿಸಲಾಗಿದೆ’ ಎಂದು ಡಿಆರ್‌ಐ ಮೂಲಗಳು ಮಾಹಿತಿ ನೀಡಿವೆ.

‘ಕಳ್ಳಸಾಗಣೆಯ ಚಿನ್ನವನ್ನು ವಸೂಲಿ ಮಾಡಬೇಕಿದ್ದು, ಅದು ಲಭ್ಯವಿಲ್ಲದೇ ಇದ್ದರೆ ಆರೋಪಿಗಳಿಂದ ಅದರ ಮೊತ್ತವನ್ನು ವಸೂಲಿ ಮಾಡಬಹುದಾಗಿದೆ. ಇಲ್ಲಿ ಪೂರ್ಣ ಪ್ರಮಾಣದ ಚಿನ್ನ ಲಭ್ಯವಿರದ ಕಾರಣಕ್ಕೆ, ದಂಡ ಪಾವತಿಸುವಂತೆ ನೋಟಿಸ್‌ ನೀಡಲಾಗಿದೆ. ಆರೋಪಿಗಳು ದಂಡ ಪಾವತಿಸಿದರೂ ಅವರ ವಿರುದ್ಧದ ಅಪರಾಧ ಪ್ರಕರಣಗಳು ಮುಂದುವರಿಯಲಿವೆ’ ಎಂದು ಮೂಲಗಳು ವಿವರಿಸಿವೆ.

₹277 crore fine imposed in gold smuggling case
Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...