Home namma chikmagalur chikamagalur ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹35 ಲಕ್ಷ ವಂಚನೆ
chikamagalurHomeLatest Newsnamma chikmagalur

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹35 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ದುಪ್ಪಟ್ಟು ಹಣ ನೀಡುವುದಾಗಿ ನಂಬಿಸಿ ₹35 ಲಕ್ಷ ಪಡೆದು ವಾಪಸ್ ನೀಡದೆ ವಂಚಿಸಿರುವ ಆರೋಪದಡಿ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಣ್ಣದಹಳ್ಳಿ ಗ್ರಾಮದ ಸಿದ್ದಪ್ಪ (65) ಅವರು ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗದ ಚಾಲುಕ್ಯನಗರದ ವೆಂಕಟೇಶ್ ಬಿ., ಹನುಮಂತಪ್ಪ ಹಾಗೂ ದೇವರಾಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಸಿದ್ದಪ್ಪ ಅವರ ಪುತ್ರ ಕಾಂತರಾಜ್ ಅವರು 2024ರಲ್ಲಿ ತಮ್ಮ ಮನೆಯ ಮೇಲೆ ₹18 ಲಕ್ಷ ಹಾಗೂ ಗ್ರಾಮದಲ್ಲಿ ಕೈಸಾಲವಾಗಿ ₹15 ಲಕ್ಷ ಸೇರಿದಂತೆ ಒಟ್ಟು ₹33 ಲಕ್ಷ ಸಾಲ ಮಾಡಿಕೊಂಡಿದ್ದರು. ಈ ಕುರಿತು ತಂದೆ ಪ್ರಶ್ನಿಸಿದಾಗ, ವೆಂಕಟೇಶ್ ಬಿ. ಎಂಬಾತ ತನ್ನ ಒಡೆತನದ ಶಾಲೋಮ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ದುಪ್ಪಟ್ಟು ಹಣ ನೀಡುವುದಾಗಿ ಭರವಸೆ ನೀಡಿದ್ದರಿಂದ ಹಣ ಹೂಡಿಕೆ ಮಾಡುತ್ತಿರುವುದಾಗಿ ಕಾಂತರಾಜ್ ತಿಳಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಂತರ ಕಾಂತರಾಜ್ ಅವರು 2025ರ ಜುಲೈ 18ರಂದು ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 27ರಂದು ವೆಂಕಟೇಶ್ ಸಿದ್ದಪ್ಪ ಅವರ ಮನೆಗೆ ಬಂದು, ಕಾಂತರಾಜ್ ಹಾಗೂ ಇತರ ಸಂಬಂಧಿಕರು ತಮ್ಮ ಕಂಪನಿಯಲ್ಲಿ ಒಟ್ಟು ₹35 ಲಕ್ಷ ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾನೆ. ಕಾಂತರಾಜ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರ ತಂದೆಗೆ ಎರಡು ತಿಂಗಳೊಳಗೆ ಹಂತ ಹಂತವಾಗಿ ಹಣವನ್ನು ಹಿಂದಿರುಗಿಸುವುದಾಗಿ ಛಾಪಾ ಕಾಗದದಲ್ಲಿ ಬರೆದುಕೊಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ಗ್ರಾಮಸ್ಥರಾದ ಕಮಲಮ್ಮ, ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು ಎನ್ನಲಾಗಿದೆ. ಬಳಿಕ ಸೆ.4ರಂದು ಚಂದನ್ ಎಂಬವರ ಖಾತೆಯಿಂದ ಸಿದ್ದಪ್ಪ ಅವರ ತರೀಕೆರೆ ಯೂನಿಯನ್ ಬ್ಯಾಂಕ್ ಖಾತೆಗೆ ₹2 ಲಕ್ಷ ಜಮೆಯಾಗಿತ್ತು. ಆದರೆ ಉಳಿದ ಹಣವನ್ನು ನೀಡದೆ ವಿಳಂಬ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಹಣಕ್ಕಾಗಿ ಸಂಪರ್ಕಿಸಿದಾಗ, ತಮ್ಮ ಕಂಪನಿಯವರಾದ ಹನುಮಂತಪ್ಪ ಮತ್ತು ದೇವರಾಜ ಅವರು ಬಂದು ಉಳಿದ ಹಣವನ್ನು ನೀಡುತ್ತಾರೆ ಎಂದು ವೆಂಕಟೇಶ್ ಹೇಳಿದ್ದಾನೆ. ಬಳಿಕ ಹನುಮಂತಪ್ಪ ಮತ್ತು ದೇವರಾಜ ಸಿದ್ದಪ್ಪ ಅವರ ಮನೆಗೆ ಬಂದು ಕೆಲ ದಿನ ಕಾಯುವಂತೆ ತಿಳಿಸಿದ್ದರು. ಆದರೆ ಇದುವರೆಗೆ ಹಣ ಹಿಂದಿರುಗಿಸದೆ, ಆರೋಪಿಗಳು ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಸಿದ್ದಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಆನ್‌ಲೈನ್ ಟ್ರೇಡಿಂಗ್ ಮೂಲಕ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಆಸೆ ತೋರಿಸಿ ತಮ್ಮ ಪುತ್ರನಿಂದ ಹಣ ಪಡೆದು ವಾಪಸ್ ನೀಡದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ವೆಂಕಟೇಶ್, ಹನುಮಂತಪ್ಪ ಹಾಗೂ ದೇವರಾಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿದ್ದಪ್ಪ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

₹35 lakh fraud in the name of online trading

Share

Leave a comment

Leave a Reply

Your email address will not be published. Required fields are marked *

Don't Miss

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್...

Related Articles

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್...