Home namma chikmagalur ಪ್ರಾಣಿವಧೆ ತಡೆಯಲು ಜಿಲ್ಲಾದ್ಯಂತ 10 ತಂಡಗಳ ರಚನೆ
namma chikmagalurchikamagalurHomeLatest News

ಪ್ರಾಣಿವಧೆ ತಡೆಯಲು ಜಿಲ್ಲಾದ್ಯಂತ 10 ತಂಡಗಳ ರಚನೆ

Share
Share

ಚಿಕ್ಕಮಗಳೂರು:  ಜೂನ್ ೭ ರಂದು ನಡೆಯಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ, ಕರು ಮತ್ತು ಒಂಟೆಗಳನ್ನು ಅಕ್ರಮವಾಗಿ ಕೂಡಿ ಹಾಕುವುದು ಹಾಗೂ ಅವುಗಳ ಸಾಗಣೆ ಮತ್ತು ವಧೆ ಮಾಡುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ನಿಯೋಜಿತ ದಿನಾಂಕಗಳಾದ ಜೂನ್ ೫ ರಿಂದ ೧೦ರವರೆಗೆ ತಮ್ಮ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ತಂಡಗಳು ಪ್ರಾಣಿ ವಧೆ ತಡೆಯುವ ಕಾರ್ಯದಲ್ಲಿ ನಿಗಾ ಇಡಲಿವೆ. ಉಳಿದಂತೆ ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ತರೀಕೆರೆ, ಅಜ್ಜಂಪುರ ಹಾಗೂ ಕಡೂರು  ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಆಯಾ ತಾಲ್ಲೂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡಗಳು ಕಾರ್ಯ ನಿರ್ವಹಿಸಲಿವೆ. ಈ ತಂಡಗಳಲ್ಲಿ ಮುಖ್ಯವಾಗಿ ನಗರಸಭೆ, ಪುರಸಭೆ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಹಾಗೂ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು, ಪೊಲೀಸ್ ಉಪನಿರೀಕ್ಷಕರು ಈ ತಂಡಗಳಲ್ಲಿ ಇರಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

10 teams formed across the district to prevent animal slaughter

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...