Home namma chikmagalur chikamagalur 100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ
chikamagalurHomeLatest Newsnamma chikmagalur

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

Share
Share

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ ತಡೆಬೇಲಿಯನ್ನು ಮುರಿದು, ಮರಕ್ಕೆ ಡಿಕ್ಕಿ ಹೊಡೆದು ಸುಮಾರು ೧೦೦ ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.

ಕಡೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಲೋಡ್ ಸಮೇತ ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿದೆ. ಚಾಲಕನ ಪ್ರಕಾರ, ಮಾರ್ಗಮಧ್ಯೆ ಬ್ರೇಕ್ ಫೇಲ್ ಆಗುತ್ತಿದ್ದಂತೆ ಲಾರಿ ನಿಯಂತ್ರಣ ಕಳೆದುಕೊಂಡಿದೆ.

ವೇಗವಾಗಿ ಸಾಗುತ್ತಿದ್ದ ಲಾರಿ ರಸ್ತೆ ಪಕ್ಕದ ತಡೆಬೇಲಿಗೆ ಡಿಕ್ಕಿ ಹೊಡೆದು ಅದನ್ನು ಮುರಿದ ಬಳಿಕ ಮರಕ್ಕೆ ಅಪ್ಪಳಿಸಿ ಪ್ರಪಾತಕ್ಕೆ ಹಾರಿದೆ.ಲಾರಿ ಸುಮಾರು ೧೦೦ ಅಡಿ ಆಳಕ್ಕೆ ಉರುಳಿದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆಯ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

10-wheeler truck falls into 100-foot ravine

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...