Home namma chikmagalur chikamagalur ಜಿಲ್ಲೆಯಲ್ಲಿ ಕಳೆದ 3 ವರ್ಷದಲ್ಲಿ 1011 ಮಹಿಳೆಯರು – ಬಾಲಕಿಯರು ನಾಪತ್ತೆ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಕಳೆದ 3 ವರ್ಷದಲ್ಲಿ 1011 ಮಹಿಳೆಯರು – ಬಾಲಕಿಯರು ನಾಪತ್ತೆ

Share
Share

ಚಿಕ್ಕಮಗಳೂರು: ಕೇರಳ ಮೂಲದ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣದಿಂದ ಬೆಚ್ಚಿಬಿದ್ದಿರುವ ಕಾಫಿನಾಡಿನಲ್ಲಿ ಇದೀಗ ಮತ್ತೊಂದು ಆಘಾತಕಾರಿ ಸತ್ಯಾಂಶ ಬಹಿರಂಗವಾಗಿದೆ.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಆತಂಕ ಮನೆಮಾಡಿರುವ ಬೆನ್ನಲ್ಲೇ, ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ನಾಪತ್ತೆಯಾಗಿರುವ ಮಹಿಳೆಯರು ಮತ್ತು ಬಾಲಕಿಯರ ಅಂಕಿಅಂಶಗಳು ಸಾರ್ವಜನಿಕರನ್ನು ಬೆಚ್ಚಿಬೀಳಿಸಿವೆ.

ಜಿಲ್ಲೆಯಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 1011 ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂಬ ಭಯಾನಕ ಮಾಹಿತಿ ಲಭ್ಯವಾಗಿದೆ.

ಈ ಪೈಕಿ 50 ಮಂದಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸ್ ಇಲಾಖೆ ಈವರೆಗೂ ವಿಫಲವಾಗಿರುವುದು ಜಿಲ್ಲೆಯ ಜನರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡಿಸುವಂತೆ ಮಾಡಿದೆ. ವಿಶೇಷವಾಗಿ ಹೆಣ್ಣು ಮಕ್ಕಳಿಗಿಂತ ಮಹಿಳೆಯರು ನಾಪತ್ತೆಯಾಗಿರುವ ಪ್ರಕರಣಗಳೇ ಇಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ.

ಮೂರು ವರ್ಷಗಳ ಅಂಕಿಅಂಶಗಳನ್ನು ಗಮನಿಸಿದರೆ, ಒಟ್ಟು 823 ಮಹಿಳೆಯರು ನಾಪತ್ತೆಯಾಗಿದ್ದು, ಅದರಲ್ಲಿ 794 ಮಂದಿಯನ್ನು ಪತ್ತೆಹಚ್ಚಲಾಗಿದೆ. ಆದರೆ ಇನ್ನೂ 29 ಮಹಿಳೆಯರ ಸುಳಿವು ಸಿಕ್ಕಿಲ್ಲ. ಅದೇ ರೀತಿ 188 ಅಪ್ರಾಪ್ತ ಬಾಲಕಿಯರು ನಾಪತ್ತೆಯಾಗಿದ್ದು,

ಈ ಪೈಕಿ 167 ಪ್ರಕರಣಗಳನ್ನು ಭೇದಿಸಲಾಗಿದೆ. ಉಳಿದ 21 ಬಾಲಕಿಯರು ಇಂದಿಗೂ ಪತ್ತೆಯಾಗಿಲ್ಲ. ಒಂದೆಡೆ ಕೇರಳದ ಬಾಲಕಿಯ ಸಾವು, ಮತ್ತೊಂದೆಡೆ ಸಾಲು ಸಾಲು ನಾಪತ್ತೆ ಪ್ರಕರಣಗಳು ಕಾಫಿನಾಡಿನ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ.

1011 women and girls have gone missing in the district in the last 3 years

Share

Leave a comment

Leave a Reply

Your email address will not be published. Required fields are marked *

Don't Miss

ಮೃತಪಟ್ಟ ಪತಿಯ ಶವದ ಜೂತೆ 10 ದಿನ ಕಾಲಕಳೆದ ಪತ್ನಿ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಅತ್ಯಂತ ಕರುಣಾಜನಕ ಘಟನೆಯೊಂದು ಸಂಭವಿಸಿದೆ. ಇಲ್ಲಿನ ನಿವಾಸಿ 77 ವರ್ಷದ ಸಿರಿಲ್ ಮೋನಿಸ್ ಎಂಬುವವರು ಸುಮಾರು ಹತ್ತು ದಿನಗಳ ಹಿಂದೆಯೇ ಅನಾರೋಗ್ಯದಿಂದ ಮಲಗಿದ್ದಲ್ಲೇ...

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು ಕನ್ನಡದ ಸಂಯೋಜಕ ಪ್ರತಿಭೆ ಎಂದು ವಿಮರ್ಶಕ, ಲೇಖಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ...

Related Articles

ಇಟ್ಟುಕೊಂಡವರು ಮತ್ತು ಕಟ್ಟಿಕೊಂಡವರ ಕಾದಾಟ ! – ವೀರಶೈವ ಲಿಂಗಾಯತ ಸಂಘ ಬೀದಿಗೆ ತಂದಿರುವುದೇಕೆ ?

ಚಿಕ್ಕಮಗಳೂರು: ಪ್ರಪಂಚದಲ್ಲಿ ಯಾರು ಸಾಧನೆ ಮಾಡದ ಕೆಲಸ ಮಾಡಿದ್ದೇವೆ ಎಂಬ ಭ್ರಮೆಯಲ್ಲಿ ತೆಲುತ್ತಿರುವವರು ಪದಾಧಿಕಾರಿಗಳ ಎಡವಟ್ಟಿನಿಂದಾಗಿ...

ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಚಿಕ್ಕಮಗಳೂರು: ಮರ್ಲೆಹೊಸಕೋಟೆಯಲ್ಲಿ ಕಂದಾಯ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿದ್ದಾಗ ಧ್ವಜಗಳನ್ನು ತೆರವುಗೊಳಿಸಿದ ಗ್ರಾಮಲೆಕ್ಕಿಗರು ಮತ್ತು...

ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಚಿಕ್ಕಮಗಳೂರು: ಕಡೂರು ತಾಲೂಕು ಪಂಚನಹಳ್ಳಿ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ತಮ್ಮ ಪಿತ್ರಾರ್ಜಿತ ಆಸ್ತಿಗೆ ನಕಲಿ ದಾಖಲೆಯನ್ನು...

ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ 80 ರೈತರಿಗೆ ವಂಚನೆ

ಕಡೂರು : ಸರಕಾರದ ವಿವಿಧ ಇಲಾಖೆಗಳಡಿ ದೊರೆಯುವ ಸಬ್ಸಿಡಿ ಸವಲತ್ತುಗಳನ್ನು ಕೊಡಿಸುವುದಾಗಿ ನಂಬಿಸಿ ೮೦ ಜನ...