Home namma chikmagalur chikamagalur ಚಿಕ್ಕಮಗಳೂರು ಜಿಲ್ಲೆಗೆ 106 ಬಿಎಸ್‌ಎನ್‌ಎಲ್ ಟವರ್‌ಗಳ ಮಂಜೂರು
chikamagalurHomeLatest Newsnamma chikmagalur

ಚಿಕ್ಕಮಗಳೂರು ಜಿಲ್ಲೆಗೆ 106 ಬಿಎಸ್‌ಎನ್‌ಎಲ್ ಟವರ್‌ಗಳ ಮಂಜೂರು

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೆ ೨೫೦ ಬಿಎಸ್‌ಎನ್‌ಎಲ್ ಟವರ್‌ಗಳು ಇದ್ದವು. ಇದೀಗ ಕೇಂದ್ರ ಸರ್ಕಾರ ಮತ್ತೆ ೧೦೬ ಟವರ್ ಮಂಜೂರು ಮಾಡಿದೆ. ಇದಲ್ಲದೆ ಸೂಕ್ತ ಸೋಲಾರ್ ವ್ಯವಸ್ಥೆ ಹಾಗೂ ಬ್ಯಾಟರಿ ಕೂಡ ಕಲ್ಪಿಸಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಬಿಎಸ್‌ಎನ್‌ಎಲ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಸ್ತುತ ಮಂಜೂರು ಮಾಡಿರುವ ಹೊಸ ಟವರ್‌ಗಳು ಆರಂಭಗೊಂಡಿದ್ದೇ ಆದಲ್ಲಿ ಚಿಕ್ಕಮಗಳೂರು ಜಿಲ್ಲೆಯ ನೆಟ್ವರ್ಕ್ ಸಮಸ್ಯೆ ಶೇ. ೮೦ರಷ್ಟು ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಬಿಎಸ್‌ಎನ್‌ಎಲ್ ನೆಟ್ವರ್ಕ್ ಕಲ್ಪಿಸುವುದು ನಮ್ಮ ಗುರಿಯಾಗಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೂ ಚರ್ಚೆ ನಡೆಸಿದ್ದೇನೆ. ಅವರು ಇನ್ನೂ ೧೫೦ ಹೊಸ ಟವರ್ ನಿರ್ಮಾಣಕ್ಕೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಇನ್ನೆರಡು ವರ್ಷದಲ್ಲಿ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ನೆಟ್ವರ್ಕ್ ಕಲ್ಪಿಸಲಾಗುವುದು ಎಂದು ಹೇಳಿದರು.

ಈ ಹಿಂದೆ ೨ಜಿ ಟವರ್‌ಗಳು ಇದ್ದಾಗ ನಾಲ್ಕು ಕಿಲೋ ಮೀಟರ್ ವರೆಗೆ ನೆಟ್ವರ್ಕ್ ಸಿಗುತ್ತಿತ್ತು. ಆದರೆ ಇದೀಗ ಟವರ್‌ಗಳು ೪ಜಿಗೆ ಅಪ್‌ಗ್ರೇಡ್ ಆದ ಬಳಿಕ ನೆಟ್ವರ್ಕ್ ಎರಡು ಕಿಲೋಮೀಟರ್‌ಗೆ ಸೀಮಿತವಾಗಿದೆ. ಜೊತೆಗೆ ಇನ್ನು ಕೆಲ ಗ್ರಾಹಕರು ೨ಜಿಯಿಂದ ೪ಜಿಗೆ ಅಪ್‌ಗ್ರೇಡ್ ಆಗದ ಕಾರಣದಿಂದಾಗಿ ಅವರಿಗೂ ನೆಟ್ವರ್ಕ್ ಸಮಸ್ಯೆಯಾಗಿದೆ. ಹೊಸದಾಗಿ ಟವರ್‌ಗಳನ್ನು ನಿರ್ಮಾಣ ಮಾಡಿದಾಗ ಮಾತ್ರ ಈ ಎಲ್ಲ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಹಿತಿ ನೀಡಿದರು.

ಟವರ್ ಅಳವಡಿಕೆಯಲ್ಲಿಯೂ ಕೆಲ ಲೋಪದೋಷಗಳಿವೆ. ಅದನ್ನು ನಾವು ಒಪ್ಪಿಕೊಂಡು ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ. ಸಿಬ್ಬಂದಿಗಳ ಕೊರತೆಯಿದೆ. ಇದರಿಂದಾಗಿಯೂ ಕೆಲ ಸಮಸ್ಯೆಗಳಾಗುತ್ತಿವೆ. ಇದೆಲ್ಲವನ್ನೂ ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಹಿರೇಮಗಳೂರು ಪುಟ್ಟಸ್ವಾಮಿ ಸೇರಿದಂತೆ ಬಿಎಸ್‌ಎನ್‌ಎಲ್ ಡಿಜಿಎಂ ಹಾಗೂ ಬಿಎಸ್‌ಎನ್‌ಎಲ್ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

106 BSNL towers sanctioned for Chikkamagaluru district

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...