Home namma chikmagalur chikamagalur ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ
chikamagalurCrime NewsHomeLatest Newsnamma chikmagalur

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

Share
Share

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೧೨.೨೫೦ ಕೆ.ಜಿ. ತೂಕದ ಹಸಿ ಗಾಂಜಾವನ್ನು ತರೀಕೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐ ಆನಂದ್ ಡಿ. ಪಾವಸ್ಕರ್ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಸ್ವಯಂ ದೂರು ದಾಖಲಿಸಿಕೊಂಡು, ಮೇಲಧಿಕಾರಿಗಳ ಸೂಚನೆಯಂತೆ ವಿಶೇಷ ತಂಡ ರಚಿಸಲಾಗಿತ್ತು. ಬಳಿಕ ತಂಡವು ತರೀಕೆರೆ ತಹಶೀಲ್ದಾರ್ ರಶ್ಮಿ ಎಚ್.ಜೆ. ಅವರ ಸಮಕ್ಷಮದಲ್ಲಿ ಗೌರಮ್ಮ ಛತ್ರದ ಹಿಂಭಾಗದಲ್ಲಿರುವ ದಿನೇಶ್ ಅವರ ಮನೆ ಮೇಲೆ ದಾಳಿ ನಡೆಸಿ, ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಹಸಿ ಗಾಂಜಾವನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಕರಣದ ಆರೋಪಿ ದಿನೇಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪ್ರತ್ಯೇಕ ಪೊಲೀಸ್ ತಂಡವನ್ನು ರಚಿಸಲಾಗಿದೆ. ಆರೋಪಿಯ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ್ ಹಾಗೂ ತರೀಕೆರೆ ಡಿವೈಎಸ್ಪಿ ಪರಶುರಾಮಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ತರೀಕೆರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ, ಪಿಎಸ್‌ಐಗಳಾದ ಆನಂದ್ ಪಾವಸ್ಕರ್ ಹಾಗೂ ಸಿಬ್ಬಂದಿಗಳಾದ ರಾಮಪ್ಪ, ದಿನೇಶ್, ಕಿರಣ್ ಕುಮಾರ್, ಮಧು ಬಿ.ಜಿ., ಹರೀಶ್, ಚಂದ್ರಶೇಖರ್, ಮೋಹನ್ ಮತ್ತು ಶ್ರೀನಿವಾಸ್ ಅವರು ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಪೊಲೀಸ್ ತಂಡದ ಕಾರ್ಯವನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

12250 kg of raw cannabis grown behind the house seized

Share

Leave a comment

Leave a Reply

Your email address will not be published. Required fields are marked *

Don't Miss

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬಾರದಂತೆ ತೆಗೆದುಕೊಂಡು ₹5.50 ಲಕ್ಷ ಹಣವನ್ನು ಬಿಡಿಸಿಕೊಂಡು ದುರುಪಯೋಗಪಡಿಸಿಕೊಂಡ ಆರೋಪದಡಿ ಇಬ್ಬರು ಸಿಬ್ಬಂದಿ ವಿರುದ್ಧ...

Related Articles

ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು...

ಆನ್‌ಲೈನ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ವಿದ್ಯಾರ್ಥಿನಿಗೆ ₹4.77 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಭಾರಿ ಲಾಭ ನೀಡುವುದಾಗಿ ನಂಬಿಸಿ...

ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ

ಚಿಕ್ಕಮಗಳೂರು: ಯುವತಿಗೆ ಅತ್ಯಾಚಾರ ಎಸಗಿದ ಆರೋಪ ಹಾಗೂ ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪಂಚನಹಳ್ಳಿ...

ಪತ್ನಿ ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ...