Home Latest News ಬೀಟಮ್ಮ ಗ್ಯಾಂಗ್ ಹಾವಳಿ ಇರುವ 10 ಹಳ್ಳಿಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ
Latest News

ಬೀಟಮ್ಮ ಗ್ಯಾಂಗ್ ಹಾವಳಿ ಇರುವ 10 ಹಳ್ಳಿಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ

Share
Share

ಚಿಕ್ಕಮಗಳೂರು : ಬೀಟಮ್ಮ ಕಾಡಾನೆ ಗ್ಯಾಂಗ್ ನ ಹಾವಳಿ ಮುಂದುವರೆದಿದ್ದು ಆಲ್ದೂರು ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಭೀತಿ ಹೆಚ್ಚಾಗಿದೆ. 17 ಆನೆಗಳ ತಂಡದಲ್ಲಿ ಒಂದು ಆನೆ ಮೃತಪಟ್ಟಿದ್ದರು ದಾಂಧಲೆ ಮಾತ್ರ ಇನ್ನೂ ಕಡಿಮೆ ಆಗಿಲ್ಲ ಈ ನಡುವೆ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಬೀಟಮ್ಮ ಗ್ಯಾಂಗ್ ಓಡಾಡುತ್ತಿರುವ ಹತ್ತಾರು ಗ್ರಾಮಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

4 ದಿನಗಳಿಂದ ಚಿಕ್ಕಮಗಳೂರಿನ ಕೆಲ ಗ್ರಾಮಗಳಲ್ಲಿ ಕಾಡಾನೆ ಹಿಂಡು ಬೀಟಮ್ಮ ಗ್ಯಾಂಗ್ ಹಾವಳಿ ಗಮನದಲ್ಲಿರಿಸಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಆಲ್ದೂರು ಸುತ್ತಮುತ್ತಲಿನ 10 ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. 4 ದಿನಗಳಿಂದ ಆಲ್ದೂರು ಸುತ್ತಮುತ್ತ ಬೀಡು ಬಿಟ್ಟಿರುವ ಬೀಟಮ್ಮ ಗ್ಯಾಂಗ್ ಭೀತಿ ಯಿಂದಾಗಿ ನಿನ್ನೆ ರಾತ್ರಿಯಿಂದ ಇಂದು ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತುಡುಕೂರು, ಆಲ್ದೂರು ಹೊಸಳ್ಳಿ, ತೋರಣಮಾವು, ಚಿತ್ತುವಳ್ಳಿ, ಆಲ್ದೂರುಪುರ ಮಡೆನೇರಳು, ದೊಡ್ಡಮಾಗರವಳ್ಳಿ, ಗುಲ್ಲನ್ ಪೇಟೆ, ಹಾಂದಿ, ಕೆಳಗೂರು ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಣೆ ಜಾರಿ ಹಿನ್ನೆಲೆಯಲ್ಲಿ 5 ಜ‌ನ ಸೇರುವಂತಿಲ್ಲ, ಕಾರ್ಮಿಕರು ಮನೆಯಿಂದ ಹೊರಬರುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಕಾಫಿ ತೋಟಗಳಲ್ಲಿ ಹಾವಳಿ ಎಬ್ಬಿಸಿರುವ 17 ಆನೆಗಳ ತಂಡದ ಬೀಟಮ್ಮ ಗ್ಯಾಂಗಿನಲ್ಲಿ 1 ಸಲಗ ಸಾವನ್ನಪಿದ್ದು ಸಲಗ ಸತ್ತ ಜಾಗದ ಸುತ್ತಮುತ್ತಲಿನ ಹಳ್ಳಿಗಳಲ್ಲೇ ಈಗಲೂ ಇರುವ ಕಾಡಾನೆ ಹಿಂಡು ಮತ್ತಷ್ಟು ತೊಂದರೆ ಮಾಡುತ್ತಿವೆ. ಸದ್ಯ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತಲ ಹಳ್ಳಿಗಳ ಜನರು ಭಯದಲ್ಲಿಯೇ ಜೀವನ ನಡೆಸುವಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....