ಮೂಡಿಗೆರೆ: ರಾಜ್ಯದಲ್ಲಿ ಎಳೆಯ ಮಕ್ಕಳ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಲ್ಲೆಯಲ್ಲಿ ಹೃದಯವೈಫಲ್ಯದಿಂದ ೧೫ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ ೧೫ ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ೧೫ ವರ್ಷದ ಬಾಲಕ ಪ್ರೀತಮ್ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
15-year-old boy suffers heart attack in Mudigere
Leave a comment