Home Crime News ಬೀಟೆ ಮರಗಳನ್ನು ಕದ್ದು ಪರಾರಿ ವೇಳೆ ದಾಳಿ : ಇಬ್ಬರ ಬಂಧನ ಇಬ್ಬರು ಪರಾರಿ
Crime News

ಬೀಟೆ ಮರಗಳನ್ನು ಕದ್ದು ಪರಾರಿ ವೇಳೆ ದಾಳಿ : ಇಬ್ಬರ ಬಂಧನ ಇಬ್ಬರು ಪರಾರಿ

Share
Share

ಚಿಕ್ಕಮಗಳೂರು :

ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಕಡಿದು ಸಾಗಿಸುತ್ತಿದ್ದ ಕಾಡುಗಳ್ಳರಿಬ್ಬರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.‌

ತುಂಬಳ್ಳಿಪುರ ಗ್ರಾಮದ ಡಿಮ್ಡ್ ಫಾರೆಸ್ಟ್ ನಿಂದ ಕಳವು ಮಾಡಿ ಪರಾರಿಯಾಗುತ್ತಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪ್ರದೀಪ್ ಹಾಗೂ ವಿಜಯ್ ಎಂಬ ಇಬ್ಬರು ಆರೋಪಿಗಳು ಬಂಧನಕ್ಕೊಳಗಾದ ವ್ಯಕ್ತಿಗಳಾಗಿದ್ದು, ಸುರೇಶ್ ಹಾಗೂ ರವಿ ಎಂಬ ಮತ್ತಿಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.
ತಲೆಮೆರೆಸಿಕೊಂಡ ಆ ಇಬ್ಬರೂ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಪಿಕಪ್ ವಾಹನವನ್ನೂ ಸಹ ವಶಕ್ಕೆ ಅರಣ್ಯಾಧಿಕಾರಿಗಳು ಪಡೆದುಕೊಂಡಿದ್ದಾರೆ. ಆಲ್ದೂರು ವಲಯದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆ ನಡೆಸಿ ಬೀಟೆ ಕಳ್ಳರನ್ನು ಹಿಡಿದಿದ್ದು ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...