Home Latest News ನಾಡಿನ ಉಳಿವಿನ ಕುರಿತು ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಸಹಕಾರಿ
Latest NewsHomenamma chikmagalurTarikere

ನಾಡಿನ ಉಳಿವಿನ ಕುರಿತು ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಸಹಕಾರಿ

Share
Share

ತರೀಕೆರೆ: ಸಾಹಿತ್ಯ ಸಮ್ಮೇಳನಗಳು ಅಬ್ಬರ, ಆಡಂಬರಗಳಿಗೆ ಆದ್ಯತೆ ನೀಡದೆ ಅರ್ಥಪೂರ್ಣವಾಗಿ ಭಾಷೆ ಕಟ್ಟಲು, ನಾಡಿನ ಉಳಿವಿನ ಕುರಿತು ಜಾಗೃತಿ ಮೂಡಿಸಲು, ನಮ್ಮ ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲಲು ನಡೆಯುವಂತಾಗಬೇಕು ಎಂದು ೨೦ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಡಾ. ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಹೇಳಿದರು.

ಪಟ್ಟಣದ ಬಯಲು ರಂಗ ಮಂದಿರ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಏರ್ಪಡಿಸಿದ್ದ ೨೦ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತಿರುವುದು ಕನ್ನಡಿಗರೆಲ್ಲರೂ ಅಂತರ ತೊರೆದು ಒಂದಾಗಿ ಆನಂದಿಸಲು ಸಹಕಾರಿಯಾಗಿದೆ.

೧೫೦೦ ವರ್ಷಗಳ ಶಾಸನಬದ್ಧ ಪರಂಪರೆ ಇರುವ ಕನ್ನಡ ಭಾಷೆಗೆ ಭವ್ಯ, ಚಿಂತನಶೀಲ, ಆಲೋಚನೆಯ ಸುದೀರ್ಘ ಇತಿಹಾಸವಿದೆ. ಅತಿ ಪ್ರಾಚೀನ, ಅಷ್ಟೇ ಶ್ರೀಮಂತಿಕೆಯುಳ್ಳ ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದಿರುವ ಜಗತ್ತಿನ ೫೦ ಭಾಷೆಗಳ ಪೈಕಿ ಕನ್ನಡವೂ ಒಂದು ಎಂಬುದು ನಮ್ಮೆಲ್ಲರ ಹಿರಿಮೆ ಎಂದು ಸಂತಸ ವ್ಯಕ್ತಪಡಿಸಿದರು.

ಡಾ. ಜೆ.ಪಿ.ಕೃಷ್ಣೇಗೌಡ ಮಾತನಾಡಿ, ಕನ್ನಡದ ಗಾಳಿ, ನೀರು, ಊಟ ಶ್ರೇಷ್ಠ. ಮಕ್ಕಳು ತಂದೆ, ತಾಯಿ ಹಾಕಿದ ಹೆಜ್ಜೆಯಲ್ಲಿ ಸಾಗಬೇಕು. ಮಾತೃಭಾಷೆಯನ್ನು ಪ್ರೀತಿಸಿ ಆಧರಿಸಬೇಕು. ಬೆವರು ಹರಿಸಿ ಸಹಸ್ರಾರು ಜನರ ಹೊಟ್ಟೆ ತುಂಬಿಸುವ ಅನ್ನದಾತನಿಗೆ ಗೌರವ ನೀಡುವುದು ಕಡ್ಡಾಯವಾಗಬೇಕು ಎಂದು ಹೇಳಿದರು.

ಡಾ. ಸಿ.ಕೆ.ಸುಬ್ಬರಾಯ ಮಾತನಾಡಿ, ಕರ್ನಾಟಕ ಪರ ಭಾಷಾ ಸಹಿಷ್ಣುತೆ ಹೊಂದಿದ್ದು, ಇಲ್ಲಿರುವ ಪ್ರತಿಯೊಬ್ಬರೂ ನಾಡು ನುಡಿಯನ್ನು ಗೌರವಿಸಬೇಕು. ಕಸಾಪ ಉದಯೋನ್ಮುಖ ಲೇಖಕಕರನ್ನು ಉತ್ತೇಜಿಸುತ್ತಿದ್ದು, ಇಂದಿನ ಯುವ ಸಮೂಹ ಸಾಹಿತ್ಯಾಭಿರುಚಿ ಮೈಗೂಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಇತರೆಡೆ ಮಾತ್ರವಲ್ಲ, ತರೀಕೆರೆ ತಾಲೂಕಿನಲ್ಲೂ ಎಲ್ಲ ಧರ್ಮ, ಪಂಥಗಳು ಸಾತ್ವಿಕ ಮನಸ್ಸಿನಿಂದ ನೆಲೆಗೊಂಡಿವೆ. ಕಸಾಪ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುವರಿಗೆ ಬೆನ್ನುತಟ್ಟುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಎಸಿ ಡಾ. ಕೆ.ಜೆ.ಕಾಂತರಾಜ್, ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ಮಾಜಿ ಉಪಾಧ್ಯಕ್ಷೆ ಎಂ.ಗಿರಿಜಾ, ಸದಸ್ಯೆ ಪಾರ್ವತಮ್ಮ, ತಹಸೀಲ್ದಾರ್ ವಿಶ್ವಜೀತ ಮೆಹತಾ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಎಸ್.ಎಸ್.ವೆಂಕಟೇಶ್, ಜಿ.ಬಿ.ಪವನ್, ಸಾಹಿತಿ ಹಳೆಕೋಟೆ ರಮೇಶ್, ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಇತರರಿದ್ದರು.

20th District Kannada Literary Conference inaugurated

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...