Home namma chikmagalur chikamagalur 3 ಟನ್ ಕಬ್ಬಿಣದ ಸರಳು ಕಳವು
chikamagalurHomeLatest Newsnamma chikmagalur

3 ಟನ್ ಕಬ್ಬಿಣದ ಸರಳು ಕಳವು

Share
Share

ಚಿಕ್ಕಮಗಳೂರು: ನಿರ್ಮಾಣ ಹಂತದಲ್ಲಿದ್ದ ಅಂಬೇಡ್ಕರ್ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್ ಕಬ್ಬಿಣದ ಸರಳುಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಪನಹಳ್ಳಿ ಗ್ರಾಮದ ದಿನೇಶ್ (32) ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಅವರು ಕಳೆದ 15 ದಿನಗಳಿಂದ ಬಿಗ್ಗನಹಳ್ಳಿಯ ನಿರ್ಮಾಣ ಹಂತದ ಅಂಬೇಡ್ಕರ್ ವಸತಿ ನಿಲಯದಲ್ಲಿ ಸೈಟ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಆಗಸ್ಟ್ 22ರಂದು ಸಂಜೆ 6 ಗಂಟೆಗೆ ಕಾಮಗಾರಿ ಮುಗಿಸಿ ಸ್ಥಳದಿಂದ ತೆರಳಿದ್ದರು. ಮರುದಿನ ಬೆಳಿಗ್ಗೆ 8 ಗಂಟೆಗೆ ದಿನೇಶ್ ಹಾಗೂ ಸಹೋದ್ಯೋಗಿ ರವಿ ವಸತಿ ನಿಲಯದ ಬಳಿ ತೆರಳಿ ಪರಿಶೀಲಿಸಿದಾಗ, ಸ್ಥಳದಲ್ಲಿ ಯಾವುದೋ ವಾಹನ ಸಂಚರಿಸಿರುವ ಗುರುತು ಕಂಡುಬಂದಿದೆ. ಅಲ್ಲದೆ, ಕಾಮಗಾರಿಗೆಂದು ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್ ಕಬ್ಬಿಣದ ಸರಳುಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಕಳವು ಮಾಡಿರುವ ಕಬ್ಬಿಣದ ಸರಳುಗಳ ಅಂದಾಜು ಮೌಲ್ಯ ₹2.10 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಕುರಿತು ಮ್ಯಾನೇಜರ್‌ಗೆ ಮಾಹಿತಿ ನೀಡಿದ ಬಳಿಕ ದಿನೇಶ್ ಅವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಬ್ಬಿಣದ ಸರಳುಗಳನ್ನು ಕಳವು ಮಾಡಿದವರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

3 tons of iron bars stolen

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ ಆರ್‌ಸಿಸಿ ಬಾಕ್ಸ್ ಕಾಮಗಾರಿಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳುತ್ತಿರುವುದರಿಂದ ಚಿಕ್ಕಮಗಳೂರು...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ...

Related Articles

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ...

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ...

ರಾಜ್ಯಾದ್ಯಂತ ಆಗಸ್ಟ್ 26 ರಿಂದ ಸೀರತ್ ಅಭಿಯಾನ

ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್...

ಎಪಿಕೆ ಫೈಲ್ ಡೌನ್‌ಲೋಡ್ – ಖಾತೆಯಿಂದ ₹1.27 ಲಕ್ಷ ವಂಚನೆ

ಚಿಕ್ಕಮಗಳೂರು: ಮೊಬೈಲ್‌ಗೆ ಅಪರಿಚಿತ ಎಪಿಕೆ (APK) ಫೈಲ್ ಡೌನ್‌ಲೋಡ್ ಆಗುವ ಮೂಲಕ ವೈಯಕ್ತಿಕ ಬ್ಯಾಂಕಿಂಗ್ ವಿವರಗಳನ್ನು...