Home namma chikmagalur chikamagalur ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ
chikamagalurCrime NewsHomeLatest Newsnamma chikmagalur

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

Share
Share

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆ.9ರಂದು ಮಧ್ಯಾಹ್ನ ಮಲ್ಲಂದೂರು ರಸ್ತೆಯಲ್ಲಿ ಪೊಲೀಸರು ಗಸ್ತಿನಲ್ಲಿದ್ದಾಗ, ಅಯ್ಯಪ್ಪನಗರದ ಬಳಿಯ ಶೆಡ್‌ನಲ್ಲಿ ಹಫೀಜ್ ಎಂಬಾತ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಮಾಹಿತಿ ಆಧರಿಸಿ ಪಂಚರ ಸಮ್ಮುಖದಲ್ಲಿ ಪೊಲೀಸರು ಶೆಡ್ ಮೇಲೆ ದಾಳಿ ನಡೆಸಿದಾಗ, ಹಫೀಜ್ ಬಿನ್ ಅನ್ವರ್ ಅಹಮ್ಮದ್ (19) ಎಂಬಾತ ಅಲ್ಲಿದ್ದನು. ಶೆಡ್‌ನಲ್ಲಿ ಮಾಂಸವನ್ನು ಹುಕ್ಕುಗಳಲ್ಲಿ ನೇತು ಹಾಕಿರುವುದು ಹಾಗೂ ದನದ ತಲೆ ಮತ್ತು ನಾಲ್ಕು ಕಾಲುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶೀಲನೆ ವೇಳೆ ಒಟ್ಟು 40 ಕೆ.ಜಿ. ದನದ ಮಾಂಸ, ಅಂದಾಜು ₹12 ಸಾವಿರ ಮೌಲ್ಯದ ಮಾಂಸ ಪತ್ತೆಯಾಗಿದ್ದು, ಜೊತೆಗೆ ಡಿಜಿಟಲ್ ತಕ್ಕಡಿ, ಎರಡು ಚಾಕುಗಳು, ಒಂದು ಕಬ್ಬಿಣದ ಕತ್ತಿ, ಆರು ಕಬ್ಬಿಣದ ಹುಕ್ಕುಗಳು ಹಾಗೂ ಒಂದು ಅರ ಸೇರಿದಂತೆ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.

ಮಾಂಸ ಮಾರಾಟಕ್ಕೆ ಯಾವುದೇ ಪರವಾನಗಿ ಇಲ್ಲ ಎಂದು ಆರೋಪಿ ತಿಳಿಸಿದ್ದು, ಟಿಪ್ಪುನಗರದ ಮುಜೀಬ್ ಅಲಿಯಾಸ್ ಮುಜ್ಜು ಎಂಬಾತನಿಂದ ಮಾಂಸವನ್ನು ಪಡೆದು ಮಾರಾಟ ಮಾಡುತ್ತಿದ್ದುದಾಗಿ ಹೇಳಿರುವುದಾಗಿ ಪೊಲೀಸ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮಾಂಸ ಎಲ್ಲಿಂದ ತರಲಾಗಿತ್ತು ಹಾಗೂ ಪ್ರಕರಣದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

40 kg of meat swords and knives seized in beef sale
Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...