Home Latest News ದತ್ತ ಜಯಂತಿಗೆ 4000 ಪೊಲೀಸರ ಹದ್ದಿನ ಕಣ್ಣು : ಎಸ್ಪಿ ವಿಕ್ರಮ್ ಅಮಟೆ
Latest News

ದತ್ತ ಜಯಂತಿಗೆ 4000 ಪೊಲೀಸರ ಹದ್ದಿನ ಕಣ್ಣು : ಎಸ್ಪಿ ವಿಕ್ರಮ್ ಅಮಟೆ

Share
Share

ಚಿಕ್ಕಮಗಳೂರು : ದತ್ತ ಜಯಂತಿ ವೇಳೆ ವಿವಾದಿತ ಐಡಿ ಪೀಠದ ಗರ್ಭಗುಡಿ ಸಮೀಪ ಮೂರು ದಿನಗಳ ಕಾಲ ಹೋಮ ಹವನ ನಡೆಸುವ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿ ವರ್ಷದಂತೆ ಈ ವರ್ಷವೂ ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೀರ್ಮಾನಿಸಿದೆ ಹೇಳಿದರು.

ದತ್ತ ಜಯಂತಿ ಹಿನ್ನೆಲೆ ಜಿಲ್ಲೆ ಸೇರಿದಂತೆ ದತ್ತಪೀಠದಲ್ಲಿ ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬರುವ ಸಾವಿರಾರು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಆರೋಗ್ಯ ಘಟಕಗಳನ್ನು ಸ್ಥಾಪಿಸಲಾಗುತ್ತೆ, ಅಲ್ಲದೆ ಈಗಾಗಲೇ ಎರಡು ಸಮುದಾಯದ ಪ್ರಮುಖರನ್ನು ಕರೆಸಿ, ಶಾಂತಿ ಸಭೆ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಂತೆ ಶಾಂತಿಯುತ ಕಾರ್ಯಕ್ರಮ ನಡೆಸಿ ಕೊಡುವುದಾಗಿ ಮನವಿ ಮಾಡಲಾಗಿದೆ ಎಂದರು.

*ಲಾಂಗ್ ಚಾಸಿ ವಾಹನಗಳಿಗೆ ನಿಷೇಧ*

ದತ್ತಪೀಠ ಭಾಗದಲ್ಲಿ ಕಿರಿದಾದ ರಸ್ತೆಗಳು ಇರುವ ಕಾರಣ ಅತಿ ಹೆಚ್ಚಿನ ವಾಹನಗಳು ದತ್ತ ಜಯಂತಿ ಸಂದರ್ಭದಲ್ಲಿ ಆಗಮಿಸುವ ನಿರೀಕ್ಷೆ ಹಿನ್ನೆಲೆ, ರಾಜ್ಯಾದ್ಯಂತ ಆಗಮಿಸುವ ಭಕ್ತರು ಲಾಂಗ್ ಚಾಸಿ ವಾಹನಗಳನ್ನು ತರದಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ ಮನವಿ ಮಾಡಿದ್ದಾರೆ. ಈಗಾಗಲೇ ದತ್ತಪೀಠ ಭಾಗದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಕಡೆ ರಸ್ತೆ ಭಾಗದ ಗುಡ್ಡ ಕುಸಿದಿದ್ದು, ಸಮಸ್ಯೆ ಉಂಟಾಗಿದೆ. ಇದರಿಂದಾಗಿ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಬಾರದು ಎಂಬ ಕಾರಣಕ್ಕೆ ಬೃಹತ್ ವಾಹನಗಳನ್ನು ನಿಷೇಧಿಸಲಾಗಿದೆ ಎಂದರು. ಒಂದು ವೇಳೆ ಲಾಂಗ್ ಜಾತಿ ವೆಹಿಕಲ್ ನಲ್ಲಿ ಬಂದರೆ ಅಲ್ಲಂ ಪುರದ ಬಳಿ ಆ ವಾಹನಗಳನ್ನು ನಿಲ್ಲಿಸಿ ಭಕ್ತರು ಜಿಲ್ಲಾ ಆಡಳಿತದಿಂದ ವ್ಯವಸ್ಥೆ ಮಾಡಿರುವ ಲಘು ವಾಹನಗಳಲ್ಲಿ ಹೋಗುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

—————-

*ಪ್ರತಿವರ್ಷದಂತೆ ಭಕ್ತರ ಪೂಜಾ ಕಾರ್ಯಗಳಿಗೆ ಅನುಮತಿ*

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಹಾಗೂ ಪ್ರತಿವರ್ಷದಂತೆ ದತ್ತ ಜಯಂತಿ ವೇಳೆ ನಡೆಯುವ ಪೂಜಾ ಕಾರ್ಯಗಳನ್ನು ನಡೆಸಲು ಈಗಾಗಲೇ ಅನುಮತಿ ನೀಡಲಾಗಿದೆ. ಈಗಾಗಲೇ ದತ್ತ ಜಯಂತಿ ಸಂಘಟಕರು ಈಗಾಗಲೇ ಮೂರು ದಿನ ಹೋಮ ಅವನ ಪೂಜಾ ಕಾರ್ಯಗಳನ್ನು ಮಾಡಲು ಮನವಿ ಮಾಡಿದ್ದಾರೆ. ಈ ವಿಚಾರವನ್ನು ಸರ್ಕಾರದ ಮುಂದೆ ಕಳಿಸಲಾಗಿದ್ದು, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಆದರೆ ಪ್ರತಿ ವರ್ಷದಂತೆ ದತ್ತಪೀಠದ ಗುಹೆಯ ಬಳಿ ಹೇಗೆ ಹೋಮ ಹವನಗಳು ನಡೆಯುತ್ತಿದ್ದವು ಅದೇ ರೀತಿ ಮುಂದುವರಿಸಲು ಅನುಮತಿ ನೀಡಲಾಗಿದೆ ಎಂದು ಮೀನಾ ನಾಗರಾಜ್ ಹೇಳಿದರು.

————-

*ಡಿಸೆಂಬರ್ 13 ಹಾಗು 14 ರಂದು ಲಿಕ್ಕರ್ ಬ್ಯಾನ್*

ದತ್ತ ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಡಿಸೆಂಬರ್ 13ರ ಬೆಳಿಗ್ಗೆ 6 ಗಂಟೆಯಿಂದ ಡಿ. 15ರ ಬೆಳಗ್ಗೆ 6 ಗಂಟೆಯ ಒಳಗೆ ಜಿಲ್ಲೆಯಾದ್ಯಂತ ಮಧ್ಯಪಾನ ನಿಷೇಧ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ. ಅಕ್ರಮವಾಗಿ ಎಲ್ಲಾದರೂ ಮಧ್ಯಪಾನ ಮಾರಾಟ ಹಾಗೂ ಸಾಗಾಟ ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬಾರ್ ಮಾಲೀಕರ ಸಂಘ ಮೂರು ದಿನಗಳ ಕಾಲ ಮಧ್ಯಪಾನ ನಿಷೇಧಿಸಿದರೆ ನಷ್ಟ ಹಾಗೂ ಸಮಸ್ಯೆ ಉಂಟಾಗುವ ಬಗ್ಗೆ ಹೇಳಿಕೊಂಡಿದ್ದಾರೆ. ಪರಿಣಾಮ ಮನವಿ ಮೇರೆಗೆ ಎರಡು ದಿನಗಳ ಕಾಲ ಲಿಕ್ಕರ್ ಬ್ಯಾಂಕ್ ಮಾಡಲಾಗಿದೆ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...