Home Latest News ಟಾಟಾ ನಗರ್‌ ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ 5.5 ಕೆ.ಜಿಯಷ್ಟು ಗಾಂಜಾ ಪತ್ತೆ
Latest NewsCrime NewsHomeKadurnamma chikmagalur

ಟಾಟಾ ನಗರ್‌ ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ 5.5 ಕೆ.ಜಿಯಷ್ಟು ಗಾಂಜಾ ಪತ್ತೆ

Share
Share

ಕಡೂರು: ಕಡೂರು ಮಾರ್ಗವಾಗಿ ಯಶವಂತಪುರಕ್ಕೆ ತೆರಳುತ್ತಿದ್ದ ಟಾಟಾ ನಗರ್‌ ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ ಬಿಹಾರ ಮೂಲದ ವ್ಯಕ್ತಿಯಿಂದ 5.5 ಕೆ.ಜಿಯಷ್ಟು ಗಾಂಜಾವನ್ನು ರೈಲ್ವೆ ಪೊಲೀಸರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡವು ಶನಿವಾರ ವಶಪಡಿಸಿಕೊಂಡಿದೆ.

ಬಿಹಾರ ರಾಜ್ಯದ ಜಮುಯ್ ಜಿಲ್ಲೆಯ ಸೋನಾ ಗ್ರಾಮದ ಮಹೇಂದ್ರ ದಾಸ್ ಬಂಧಿತ ಆರೋಪಿ. ಈತ ಟಾಟಾ ನಗರ ರೈಲು ಗಾಡಿಯಲ್ಲಿ ಬೆಡ್ ರೋಲ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ.

ಶನಿವಾರ ಸಂಜೆ ಸಂಚರಿಸುತ್ತಿದ್ದ ರೈಲಿನಲ್ಲಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಆರೋಪಿ ಗಾಂಜಾ ಸೊಪ್ಪು ಹೊಂದಿದ ಚೀಲ ಸಾಗಿಸುತ್ತಿದ್ದದ್ದು ಕಂಡುಬಂದ ಹಿನ್ನೆಲೆಯಲ್ಲಿ ಕಡೂರು ರೈಲ್ವೆ ನಿಲ್ದಾಣದಲ್ಲಿ ಮಹೇಂದ್ರನನ್ನು ಬಂಧಿಸಿ, ₹3.3ಲಕ್ಷ ಮೌಲ್ಯದ ಗಾಂಜಾ ಹಾಗೂ ಒಂದು ಮೊಬೈಲ್ ಪೋನ್ ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ರೈಲ್ವೆ ಪೊಲೀಸ್ ಇಲಾಖೆಯ ಸಹಾಯಕ ಉಪನಿರೀಕ್ಷಕ ಬಿ.‌ಆನಂದ್, ಟಿ. ಶಿವಾನಂದ, ಮುಜಮ್ಮಿಲ್ ಖಾನ್, ಶಿವಮೂರ್ತಿ, ಕಡೂರು ಅಬಕಾರಿ ನಿರೀಕ್ಷಕ ಎಲ್‌.ಸಿ. ಸಂದೀಪ್, ಎಸ್. ಶ್ರೀಧರ್, ವಾಹನ ಚಾಲಕ ಅಶೋಕ್‌ ಹಾಗೂ ಸಿಬ್ಬಂದಿ ಇದ್ದರು.

5.5 kg of marijuana found in Tata Nagar Express train

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...