Home Latest News ಗೋವು ಕದ್ದು ಸಾಗಿಸುತ್ತಿದ್ದ 5 ಮಂದಿ ಆರೋಪಿಗಳ ಬಂಧನ
Latest NewschikamagalurHomenamma chikmagalur

ಗೋವು ಕದ್ದು ಸಾಗಿಸುತ್ತಿದ್ದ 5 ಮಂದಿ ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು:  ಗೋವುಗಳನ್ನು ಕದ್ದು ಸಾಗಿಸುತ್ತಿದ್ದ ೫ ಮಂದಿ ಆರೋಪಿಗಳನ್ನು ಕಳಸ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿಯ ಹೊಳೆ ನೇರಳೆಕೆರೆಯ ಸಲ್ಮಾನ್, ಭದ್ರಾವತಿಯ ಸೀಗೇಬಾಗಿಯ ಸಾಹಿಲ್, ಶಿವಮೊಗ್ಗ ನಗರ ತಿಪಲಾಪುರ ಕ್ಯಾಂಪ್‌ನ ಸಯ್ಯದ್ ತೌಫಿಕ್, ಭದ್ರಾವತಿಯ ಕಾಗೆಕೊಡಮಗ್ಲೆ ನಿವಾಸಿ ಅಬ್ದುಲ್ ಅಜೀಜ್ ಹಾಗೂ ಭದ್ರಾವತಿಯ ಅರಳಿಹಳ್ಳಿಯ ಅಬ್ದುಲ್ ಜಾವಾದ್ ಬಂಧಿತ ಆರೋಪಿಗಳಾಗಿದ್ದು ಅವರರಿಂದ ಗೋವು ಕಳ್ಳತನಕ್ಕೆ ಬಳಸಲಾಗಿದ್ದ ಮಹೀಂದ್ರ ಝೈಲೋ ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ತಿಳಿಸಿದ್ದಾರೆ.

ಆರೋಪಿಗಳು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳು ಆಗಸ್ಟ್ ೧೦ ರಂದು ರಾತ್ರಿ ಕಳಸ ಪೊಲೀಸ್ ಠಾಣೆಯ ಬಲಿಗೆ ಚೆಕ್ ಪೋಸ್ಟ್ ಬಳಿ ಝೈಲೋ ಕಾರಿನಲ್ಲಿ ನಾಲ್ಕು ದನಗಳನ್ನು ಕದ್ದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಳಸ ಪಿಎಸ್‌ಐ ಚಂದ್ರ ಶೇಖರ್ ಮತ್ತು ಸಿಬ್ಬಂಧಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಎಸ್ಪಿ ತಿಳಿಸಿದಾರೆ.

5 accused arrested for stealing and transporting cows

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....