Home namma chikmagalur chikamagalur ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ
chikamagalurCrime NewsHomeLatest Newsnamma chikmagalur

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

Share
Share

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ ಪರಾರಿಯಾಗಿರುವ ಘಟನೆ ಕಡೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಂಧುಗಳ ಮನೆಯ ಶುಭ ಸಮಾರಂಭದಲ್ಲಿ ಪಾಲ್ಗೊಂಡು ಊರಿಗೆ ಮರಳಲು ಮಹಿಳೆಯೊಬ್ಬರು ತಮ್ಮ ಕುಟುಂಬಸ್ಥರೊಂದಿಗೆ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಸಂಜೆ ವೇಳೆಗೆ ಊರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿದ್ದಂತೆ ಪ್ರಯಾಣಿಕರ ತೀವ್ರ ನೂಕುನುಗ್ಗಲು ಉಂಟಾಗಿದೆ. ಇದನ್ನೇ ಹೊಂಚು ಹಾಕುತ್ತಿದ್ದ ಅಪರಿಚಿತ ಖದೀಮರು, ಬಸ್ ಹತ್ತುವ ಧಾವಂತದಲ್ಲಿದ್ದ ಮಹಿಳೆಯ ಗಮನವನ್ನು ಚಾಣಾಕ್ಷತನದಿಂದ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ.

ಬಸ್ ಹೊರಟು ಮಾರ್ಗಮಧ್ಯೆ ಮಲ್ಲೇಶ್ವರ ಗ್ರಾಮ ಸಮೀಪಿಸುತ್ತಿದ್ದಂತೆ ಕುತ್ತಿಗೆಯಲ್ಲಿದ್ದ ಸರ ನಾಪತ್ತೆಯಾಗಿರುವುದು ಮಹಿಳೆಯ ಗಮನಕ್ಕೆ ಬಂದಿದ್ದು, ತಕ್ಷಣವೇ ಕಂಗಾಲಾಗಿ ಬಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಕಳವಾಗಿರುವ ಸುಮಾರು 50 ಗ್ರಾಂ ಬಂಗಾರದ ಸರದ ಮೌಲ್ಯ ಅಂದಾಜು ₹4 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಸಂತ್ರಸ್ತೆ ನೀಡಿದ ಲಿಖಿತ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಿಲಾಡಿ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

50-gram gold chain stolen at Kadur bus stand.

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ,...

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು...