Home Latest News ಸಮರ್ಪಣಾ ಸಮಾವೇಶಕ್ಕೆ ಜಿಲ್ಲೆಯಿಂದ 5 ಸಾವಿರ ಮಂದಿ
Latest NewschikamagalurHomenamma chikmagalur

ಸಮರ್ಪಣಾ ಸಮಾವೇಶಕ್ಕೆ ಜಿಲ್ಲೆಯಿಂದ 5 ಸಾವಿರ ಮಂದಿ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸುತ್ತಿದ್ದು, ಮೇ ೨೦ ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಮರ್ಪಣಾ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಜಿಲ್ಲೆಯಿಂದ ೫ ಸಾವಿರಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರೆಂಟಿಗಳನ್ನು ರಾಜ್ಯದ ಜನತೆಗೆ ನೀಡಿದೆ. ಇದಕ್ಕಾಗಿ ಬಜೆಟ್‌ನಲ್ಲಿ ೫೬ ಸಾವಿರ ಕೋಟಿ ರೂ. ಮೀಸಲಿರಿಸಿದ್ದಾರೆಂದು ತಿಳಿಸಿದರು.
ಇದೇ ಸಮಾವೇಶದಲ್ಲಿ ಕಂದಾಯ ಸೇವೆಗಳ ಸುಧಾರಣೆಗೆ ಭೂ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಿದ್ದಾರೆ. ರಾಜ್ಯದ ಜನತೆ ಸರ್ಕಾರದ ಮೇಲೆ ವಿಶ್ವಾಸವಿಟ್ಟಿದ್ದರಿಂದ ಎರಡು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದರು.

ರೈತರ ಜಮೀನುಗಳು ಪೋಡಿಯಾಗದೆ ಸಮಸ್ಯೆ ಎದುರಿಸುತ್ತಿದ್ದ ವೇಳೆ, ಕೃಷಿ ಸಚಿವರು ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದರು. ಹೊಸ ಕಂದಾಯ ಗ್ರಾಮಗಳನ್ನು ರಚಿಸಿದರು. ಭೂ ನ್ಯಾಯ ಮಂಡಳಿ ತೆರೆದು ಪೌತಿಖಾತೆ ಆಂದೋಲನ ನಡೆಸಿದರು. ಈಗ ಕಂದಾಯ ಸೇವೆಗಳ ಸುಧಾರಣೆಗಾಗಿ ಭೂ ಗ್ಯಾರೆಂಟಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕಳೆದ ವರ್ಷ ಎತ್ತಿನಹೊಳೆ ಯೋಜನೆ ಜಾರಿಗೊಳಿಸಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಜಿಲ್ಲೆಯ ಬೆಳವಾಡಿ ಗ್ರಾಮದ ಕರೆಗೆ ನೀರು ಬಂದಿದೆ. ಜಿಲ್ಲೆಯ ರಣಘಟ್ಟ ಯೋಜನೆಗೆ ಅನುದಾನ ನೀಡಿದೆ ಎಂದರು.

ಪಂಚಗ್ಯಾರಂಟಿ ಯೋಜನೆ ಕುರಿತು ಬಿಜೆಪಿಯವರು ಅಪಹಾಸ್ಯ ಮಾಡಿದ್ದರು. ಆದರೆ, ದೆಹಲಿ ಚುನಾವಣೆ, ಮಹಾರಾಷ್ಟ್ರ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅನುದಾನವನ್ನು ಶೀಘ್ರವೇ ನೀಡಬೇಕೆಂದು ಒತ್ತಾಯಿಸಿದರು.

ಐದು ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸುವ ಕೆಲಸ ಮಾಡಿದೆ. ನೀಡಿದ ಭರವಸೆಯಂತೆ ನಡೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಮಂತ್ರಿಮಂಡಲವನ್ನು ಅಭಿನಂದಿಸುವುದಾಗಿ ಇದೇ ವೇಳೆ ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ನಟರಾಜ್ ಎಸ್.ಕೊಪ್ಪಲು, ರಘು ಪಿಳ್ಳೇನಹಳ್ಳಿ, ವಿಜಯಕುಮಾರ್, ನಾಗಭೂಷಣ್, ಕಾಂತರಾಜ್, ರಾಕೇಶ್ ಇದ್ದರು.

5000 people from the district attend the dedication ceremony

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...