Home namma chikmagalur chikamagalur ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ 51 ಮನೆಗೆ ಹಾನಿ
chikamagalurHomeLatest Newsnamma chikmagalur

ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ 51 ಮನೆಗೆ ಹಾನಿ

Share
Share

ಚಿಕ್ಕಮಗಳೂರು: ಕಾಫಿನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜೂನ್ 4ರವರೆಗೆ ಕೇಂದ್ರ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕಳೆದ ಪೂರ್ವ ಮುಂಗಾರು ಅವಧಿಯಲ್ಲಿ (ಮಾರ್ಚ್ 1 ರಿಂದ ಮೇ 31) ಜಿಲ್ಲೆಯಲ್ಲಿ ಸರಾಸರಿ 153.2 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ. -4 ರಷ್ಟು ಕೊರತೆಯಿದ್ದರೂ ಕೊಪ್ಪ, ಶೃಂಗೇರಿ ಮತ್ತು ಕಳಸ ತಾಲೂಕುಗಳಲ್ಲಿ ಅಧಿಕ ಮಳೆಯಾಗಿದೆ.

ಸದ್ಯ ಭದ್ರಾ ಜಲಾಶಯದಲ್ಲಿ 137.2 ಅಡಿ ನೀರಿನ ಮಟ್ಟವಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲೆಯಾದ್ಯಂತ ಒಟ್ಟು 34 ತಂಡಗಳನ್ನು ನಿಯೋಜಿಸಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳ ಮಳೆಯಿಂದಾಗಿ ಜಿಲ್ಲೆಯಲ್ಲಿ ವ್ಯಾಪಕ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಒಟ್ಟು 1870 ವಿದ್ಯುತ್ ಕಂಬಗಳು, 37.40 ಕಿ.ಮೀ ವಿದ್ಯುತ್ ಮಾರ್ಗ ಹಾಗೂ ಎರಡು ಅಂಗನವಾಡಿ ಕಟ್ಟಡಗಳು ಹಾನಿಗೊಂಡಿವೆ. ಇದರಿಂದ ಸುಮಾರು 323.52 ಲಕ್ಷ ರೂ. ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟು 51 ಮನೆಗಳು ಭಾಗಶಃ ಹಾಗೂ 1 ಮನೆ ಪೂರ್ಣ ಹಾನಿಯಾಗಿದ್ದು, ನಿಯಮಾವಳಿಗಳಂತೆ ಕ್ರಮವಾಗಿ 6,500 ರೂ. ಮತ್ತು 1,20,000 ರೂ. ಪರಿಹಾರ ವಿತರಿಸಲಾಗುತ್ತಿದೆ. ಹಾಗೆಯೇ 26.58 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಡಿಸಿ ಸೂಚಿಸಿದ್ದಾರೆ.

ವಿಪತ್ತು ನಿರ್ವಹಣೆಗೆ ಜಿಲ್ಲಾ ನಿಧಿಯಲ್ಲಿ 26.82 ಕೋಟಿ ರೂ. ಅನುದಾನ ಲಭ್ಯವಿದ್ದು, ಯಾವುದೇ ಆರ್ಥಿಕ ಕೊರತೆಯಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ತುರ್ತು ಸಂದರ್ಭಗಳ ಎದುರಿಸಲು ಮೂಡಿಗೆರೆ, ನರಸಿಂಹರಾಜಪುರ ಮತ್ತು ಚಿಕ್ಕಮಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ರಸ್ತೆ ಬ್ಲಾಕ್ ಹಾಗೂ ಭೂಕುಸಿತ ತಡೆಯಲು ಜೆಸಿಬಿ, ಹಿಟಾಚಿ ಮತ್ತು ಯಂತ್ರಗಳನ್ನು ಸನ್ನದ್ಧವಾಗಿಡಲಾಗಿದೆ.

ತಹಶೀಲ್ದಾರರ ನೇತೃತ್ವದ ವಿಶೇಷ ತಂಡಗಳ ಜೊತೆಗೆ 561 ಗೃಹರಕ್ಷಕರು, 64 ಈಜುಗಾರರು ಹಾಗೂ 566 ಸ್ವಯಂಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರು ತುರ್ತು ನೆರವಿಗಾಗಿ ಜಿಲ್ಲಾಧಿಕಾರಿ ಕಚೇರಿ (08262-238950), ಪೊಲೀಸ್ (9480805100) ಅಥವಾ ಮೆಸ್ಕಾಂ (9448289543) ಕಂಟ್ರೋಲ್ ರೂಂ ಅನ್ನು 24×7 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಎಸ್‌ಐಆರ್ (SIR) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣಾ ಆಯೋಗದ ಸುತ್ತೋಲೆಯಂತೆ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿ ನಿಗದಿ ಪಡಿಸಲಾಗಿದ್ದು, ಜೂನ್ 20ರಿಂದ 29ರ ವರೆಗೆ ಸಿಬ್ಬಂದಿಗೆ ತರಬೇತಿ ಹಾಗೂ ಪ್ರೀ-ಫಿಲ್ಡ್ ಎನ್ಯುಮರೇಷನ್ ಫಾರಂಗಳ ಮುದ್ರಣ ಕಾರ್ಯ ನಡೆಯಲಿದೆ. ತದನಂತರ ಜೂನ್ 30ರಿಂದ ಜುಲೈ 29ರ ವರೆಗೆ ಒಂದು ತಿಂಗಳ ಕಾಲ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಈ ಫಾರಂಗಳನ್ನು ಜನರಿಂದ ಭರ್ತಿ ಮಾಡಿಸಿ ಸಂಗ್ರಹಿಸಲಿದ್ದಾರೆ.

ಜುಲೈ 29ರೊಳಗೆ ಮತಗಟ್ಟೆಗಳ ಮರುಹಂಚಿಕೆ ಪ್ರಕ್ರಿಯೆ ಮುಗಿಯಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಸಾರ್ವಜನಿಕರು ಆಗಸ್ಟ್ 5ರಿಂದ ಸೆಪ್ಟೆಂಬರ್ 4ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 3ರೊಳಗೆ ಇಆರ್‌ಒ ಅವರಿಂದ ಇವುಗಳ ಇತ್ಯರ್ಥ ನಡೆಯಲಿದೆ.

ಈ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಜಿಲ್ಲೆಯ 1,230 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಸಭೆ ನಡೆಸಿ, ಬಾಕಿ ಇರುವ ಬೂತ್ ಮಟ್ಟದ ಏಜೆಂಟರ ನೇಮಕಾತಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಲಾಗಿದೆ. ಜೊತೆಗೆ, ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮದವರಿಗಾಗಿ ವಿಶೇಷ ತರಬೇತಿ ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಒಟ್ಟು 9,67,287 ಮತದಾರರ ಪೈಕಿ ಈಗಾಗಲೇ 8,63,478 ಮತದಾರರ ಮ್ಯಾಪಿಂಗ್ ಪೂರ್ಣಗೊಂಡು ಶೇ. 89.27ರಷ್ಟು ಪ್ರಗತಿ ಸಾಧಿಸಲಾಗಿದೆ. ಕಳೆದ ಹತ್ತು ದಿನಗಳಲ್ಲೇ 34,000 ಮತದಾರರ ಮ್ಯಾಪಿಂಗ್ ಮಾಡಲಾಗಿದ್ದು, ಜೂನ್ 20ರ ಗಡುವಿನೊಳಗೆ ಇನ್ನುಳಿದ ಪ್ರಕ್ರಿಯೆಯನ್ನು ಮುಗಿಸಲು ಜಿಲ್ಲಾಡಳಿತವು ವಿಶೇಷ ತಂಡಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

51 houses damaged in pre-monsoon rains in the district

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ...

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ....

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....