Home namma chikmagalur chikamagalur ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು
chikamagalurCrime NewsHomeLatest Newsnamma chikmagalur

ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು

Share
Share

ಕೊಪ್ಪ: ತೀರ್ಥಹಳ್ಳಿ–ಕೊಪ್ಪ ಮುಖ್ಯ ರಸ್ತೆಯ ಚಿಕ್ಕನಕೊಡಿಗೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 80 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಗಡಿಕಲ್ ನಿವಾಸಿ ಸಿದ್ದಯ್ಯ (80) ಮೃತಪಟ್ಟವರು. ಅ.17ರಂದು ಸಂಜೆ ಗಡಿಕಲ್‌ನಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಚಿಕ್ಕನಕೊಡಿಗೆಯ ಸಿಂಗಪ್ಪ ಅವರ ಮನೆಯ ಸಮೀಪ ಸಂಜೆ 6ರಿಂದ 6.35ರ ನಡುವೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ತಲೆ ಹಾಗೂ ಕಾಲಿಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಸಿದ್ದಯ್ಯ ಅವರನ್ನು ಸಂಬಂಧಿಕರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಪಘಾತ ಎಸಗಿದ ವಾಹನದ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಮೃತರ ಸಂಬಂಧಿ ಮಂಜುನಾಥ ಟಿ. ಅವರು ಕೊಪ್ಪ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

80-year-old man dies in accident near Chikkanakodige

Share

Leave a comment

Leave a Reply

Your email address will not be published. Required fields are marked *

Don't Miss

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ ಕುರಿತು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ‘ಬಿ’ ಫೈನಲ್ ವರದಿಯನ್ನು ವಿರೋಧಿಸಿ, ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಪೆಟಿಷನ್...

ಅ. 15ರಂದು ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಜಿಲ್ಲಾ ತಂಡದ ಆಯ್ಕೆ

ಚಿಕ್ಕಮಗಳೂರು: 5ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ–2026 ಹಾಗೂ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ 2026–27ರಲ್ಲಿ ಭಾಗವಹಿಸುವ ಚಿಕ್ಕಮಗಳೂರು ಜಿಲ್ಲಾ ತಂಡವನ್ನು ಆಯ್ಕೆ ಮಾಡಲು ಅಕ್ಟೋಬರ್‌ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ...

Related Articles

₹1.49 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಅಜ್ಜಂಪುರ: ಮನೆಯ ಬೀರುವಿನ ಬೀಗ ಮುರಿದು ₹1.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು...

₹4.94 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳ ಕಳವು

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್‌ ಸಮೀಪದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಹಳೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ₹4.94...

ಜಿಲ್ಲೆಯಲ್ಲಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಐವರಿಗೆ ಗಾಯ

ಕಡೂರು/ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 16 ವರ್ಷದ ಬಾಲಕ ಸೇರಿದಂತೆ...

ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಿ

ಚಿಕ್ಕಮಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು, ಆದರ್ಶಗಳು ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಅರಿತುಕೊಂಡು,...