Home namma chikmagalur chikamagalur ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿಯಿಂದ 85,769 ಹೆಸರು ಹೊರಕ್ಕೆ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿಯಿಂದ 85,769 ಹೆಸರು ಹೊರಕ್ಕೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಮಂಗಳವಾರ ಜಿಲ್ಲಾಡಳಿತ ಪ್ರಕಟಿಸಿದೆ. ಮತದಾರರ ಪಟ್ಟಿಯಿಂದ 85,769 ಹೆಸರು ಹೊರಗುಳಿದಿದ್ದರೆ, 8,74,462 ಮತ ದಾರರು ಪಟ್ಟಿಯಲ್ಲಿ ಉಳಿದಿಕೊಂಡಿದ್ದಾರೆ.

ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 4,29,733 ಪುರುಷರು, 4,44,712 ಮಹಿಳೆಯರು ಮತ್ತು 17 ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಪಟ್ಟಿಯಲ್ಲಿದ್ದಾರೆ. ಆ. 24ರಂದು ಪ್ರಕಟವಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ 8,63,516 ಮತದಾರರ ಹೆಸರುಗಳಿದ್ದು, ಆ ಬಳಿಕ ಒಟ್ಟು 10,946 ಮತದಾರರು ಹೆಚ್ಚಾಗಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಗೆ ಮುಂಚೆ ಜಿಲ್ಲೆಯಲ್ಲಿ ಇದ್ದ ಮತದಾರರ ಸಂಖ್ಯೆಗೆ ಹೋಲಿಸಿದರೆ, ಜಿಲ್ಲೆಯಲ್ಲಿ ಒಟ್ಟು 85,769 ಮತದಾರರು ಕಡಿಮೆ ಆಗಿದ್ದಾರೆ.

ಎಸ್‌ಐಆ‌ರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ ಜಿಲ್ಲೆಯಲ್ಲಿ ಒಟ್ಟು 9,60,231 ಮತದಾರರಿದ್ದರು. 2026ರ ಜೂನ್ 30ರಿಂದ ಆ. 17ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ವಿವರಿಸಿದರು.

ಎರಡು ಕಡೆ ಹೆಸರಿದ್ದವರು, ಸ್ಥಳಾಂತರಗೊಂಡವರು, ಮೃತರು ಸೇರಿ ಒಟ್ಟು 96,715 ಮಂದಿ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು 8,63,516 ಮತದಾರರ ಹೆಸರು ಕರಡು ಪಟ್ಟಿಯಲ್ಲಿತ್ತು. ಈ ಕರಡು ಪಟ್ಟಿಗೆ ಆಕ್ಷೇಪ ಸಲ್ಲಿಸಲು ಹಾಗೂ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದ ಮತದಾರರು ಹಕ್ಕು ಪ್ರತಿಪಾದಿಸಲು ಸೆ. 23ರ ತನಕ ಅವಕಾಶ ನೀಡಲಾಗಿತ್ತು.

*15,244 ಜನ ಹೊಸದಾಗಿ ಸೇರ್ಪಡೆಯಾದರು. ಈ ಪೈಕಿ ಅರ್ಹರದಲ್ಲದ 4,298 ಮತದಾರರ ಹೆಸರು ಪಟ್ಟಿಯಿಂದ ಕೈಬಿಡಲಾಯಿತು. ಅಂತಿಮವಾಗಿ 10,946 ಸೇರ್ಪಡೆಯಾದರು. ಇದರಿಂದಾಗಿ ಅಂತಿಮವಾಗಿ ಮತದಾರರ ಸಂಖ್ಯೆ ಏರಿಕೆಯಾಗಿದೆ’ ಎಂದು ಹೇಳಿದರು.

ಕರಡು ಪಟ್ಟಿ ಪ್ರಕಟಿಸಿದ ಬಳಿಕ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದ, ತಂದೆ-ತಾಯಿ ಹೆಸರು ಹೋಲಿಕೆಯಾಗದ 91,610 ಜನರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಇದರಲ್ಲಿ ಅರ್ಹರಲ್ಲದ 2,041 ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಅಂತಿಮವಾಗಿ 8, 74,462 ಪಟ್ಟಿಯಲ್ಲಿ ಉಳಿದಿದ್ದಾರೆ ಎಂದು ವಿವರಿಸಿದರು.

ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಾಲಕಾಲಕ್ಕೆ ರಾಜಕೀಯ ಪಕ್ಷಗಳ ಸಭೆಯನ್ನೂ ನಡೆಸಿ ಮಾಹಿತಿ ನೀಡಲಾಗಿದೆ. ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಬಯಸುವವರು ಅರ್ಜಿ ಸಲ್ಲಿಸಲು ಈಗಲೂ ಅವಕಾಶ ಇದೆ. ಪಟ್ಟಿಯಿಂದ ಹೊರಗುಳಿದಿದ್ದರೆ ಅವರು ಅರ್ಜಿ ಸಲ್ಲಿಸಿ ಹಕ್ಕು ಪ್ರತಿಪಾದಿಸಲು ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

85769 names removed from the final electoral roll in the district

Share

Leave a comment

Leave a Reply

Your email address will not be published. Required fields are marked *

Don't Miss

ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆ

ಕಡೂರು: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಡೂರು ತಾಲ್ಲೂಕು ಬೀರೂರು ಹೋಬಳಿ ಬಿಸಿಲೆರೆ ಸಮೀಪದ ಅರೇಹಳ್ಳಿ ಗ್ರಾಮದ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆಯಾಗಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿದ್ದರು...

ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಸಿ.ಎಸ್. ಯೋಗೀಶ್ ಮೃತ ದುರ್ದೈವಿ....

Related Articles

ಮಕ್ಕಳ ಲೈಂಗಿಕ ಶೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ – ಪ್ರಕರಣ ದಾಖಲು

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಮಗು ಮತ್ತು ವಯಸ್ಕರು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ...

ಹಿಟ್‌ ಆ್ಯಂಡ್‌ ರನ್‌-ಸವಾರ ಸಾವು

ಕಡೂರು: ಹಿಂಬದಿಯಿಂದ ಬಂದ ಅಪರಿಚಿತ ಗೂಡ್ಸ್ ವಾಹನದ ಚಾಲಕನೊಬ್ಬ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ...

ಚಿಕ್ಕಮಗಳೂರಿನಲ್ಲಿ ಕ್ರೈಸ್ತ ಸಮುದಾಯದ ಬೃಹತ್ ಫಲಾನುಭವಿ ಸಮಾವೇಶ

ಚಿಕ್ಕಮಗಳೂರು: ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಅಕ್ಟೋಬರ್ 28ರಂದು ಚಿಕ್ಕಮಗಳೂರು ನಗರದಲ್ಲಿ ಕ್ರೈಸ್ತ...

ಚಿಕ್ಕಮಗಳೂರಿನಲ್ಲಿ 1.98 ಕೋಟಿ ವೆಚ್ಚದಲ್ಲಿ ಮೀಡಿಯನ್ ಲೈಟ್ ಅಳವಡಿಕೆ

ಚಿಕ್ಕಮಗಳೂರು: ನಗರದ ಪ್ರಮುಖ ರಸ್ತೆಯೊಂದರಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದೆ ಸಂಭವಿಸುತ್ತಿದ್ದ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ...