Home Crime News ಮುಳ್ಳಯ್ಯನಗಿರಿ ರಸ್ತೆಯಲ್ಲಿ 250 ಅಡಿ ಕೆಳಗೆ ಬಿದ್ದ ಕಾರು
Crime Newsnamma chikmagalurState News

ಮುಳ್ಳಯ್ಯನಗಿರಿ ರಸ್ತೆಯಲ್ಲಿ 250 ಅಡಿ ಕೆಳಗೆ ಬಿದ್ದ ಕಾರು

Share
Share

ಚಿಕ್ಕಮಗಳೂರು :

ಮುಳ್ಳಯ್ಯನಗಿರಿ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ರಪಾತಕ್ಕೆ ಉರುಳಿ ಐವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಸಿನಿಮೀಯ ರೀತಿಯಲ್ಲಿ ಅರಣ್ಯದ ಮಧ್ಯೆ 250 ಅಡಿಗಳಷ್ಟು ಕೆಳಗೆ ಬಿದ್ದಿದೆ.

ಮುಳ್ಳಯ್ಯನಗಿರಿಯಲ್ಲಿ ತಪ್ಪಲಿನಲ್ಲಿ ಸುಮಾರು 250 ಅಡಿ ಎತ್ತರದ ಪ್ರದೇಶದಿಂದ ಕಾರೊಂದು ಕೆಳಗೆ ಬಿದ್ದಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಹೈದರಾಬಾದ್ ಮೂಲದ ಕಾರು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಿಗೂ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬರೋಬ್ಬರಿ 250 ಅಡಿ ಎತ್ತರದಿಂದ ಬೀಳುವಾಗ ಮರಗಳು ಹಾಗೂ ರೆಂಬೆ ಕೊಂಬೆಗಳಿಗೆ ಸಿಲುಕಿದ ಕಾರು ಸಿನಿಮೀಯ ರೀತಿಯಲ್ಲಿ ಕೆಳಗೆ ಬಿದ್ದಿದ್ದು ಇದರಿಂದಾಗಿ ಕಾರು ಬೀಳುವ ವೇಗ ಕಡಿಮೆಯಾಗಿದೆ, ಪ್ರಾಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮರದ ರೆಂಬೆ-,ಕೊಂಬೆಗಳಿಗೆ ಸಿಲುಕಿ ಅಲ್ಲೇ ನಿಂತ ಕಾರು ಸಂಪೂರ್ಣ ಜಖಂ ಗೊಂಡಿದೆ. ಸದ್ಯ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಹಾಗೂ ಸ್ಥಳೀಯರು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಿರುವು ರಸ್ತೆಯಲ್ಲಿ ಅಪಘಾತಗಳು ನಿತ್ಯ ಹೆಚ್ಚುತ್ತಿವೆ

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...