Home Latest News ದತ್ತಮಾಲೆ ವೇಳೆ ಭಜನೆ ಘೋಷಣೆಗೆ ನಿರ್ಬಂಧಕ್ಕೆ ಶ್ರೀರಾಮಸೇನೆ ಆಕ್ರೋಶ
Latest News

ದತ್ತಮಾಲೆ ವೇಳೆ ಭಜನೆ ಘೋಷಣೆಗೆ ನಿರ್ಬಂಧಕ್ಕೆ ಶ್ರೀರಾಮಸೇನೆ ಆಕ್ರೋಶ

Share
Share

ಚಿಕ್ಕಮಗಳೂರು : ಶ್ರೀರಾಮಸೇನೆ ಪ್ರಾಯೋಜಿತ ದತ್ತಮಾಲಾ ಅಭಿಯಾನಕ್ಕೆ ಮಾಲಾಧಾರಿಗಳಿಗೆ ಇಲ್ಲಸಲ್ಲದ ನಿಬಂಧನೆಗಳನ್ನು ಹೇರಿರುವ ಚಿಕ್ಕಮಗಳೂರು ಜಿಲ್ಲಾಡಳಿತದ ಕ್ರಮಕ್ಕೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದತ್ತ ಮಾಲಾಧಾರಿಗಳು ಘೋಷಣೆ ಹಾಕುವಂತಿಲ್ಲ, ಮದ್ಯಪಾನ ಮಾಡುವಂತಿಲ್ಲ, ಭಜನೆ ಮಾಡುವಂತಿಲ್ಲ, ಧ್ಯಾನ ಮಾಡುವಂತಿಲ್ಲ, ಹೀಗೆ ಹತ್ತಾರು ನಿಬಂಧನೆಗಳನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಶ್ರೀರಾಮಸೇನೆ ನಡೆಸುವ ನವಂಬರ್ 10 ರ ದತ್ತಮಾಲಾ ಅಭಿಯಾನಕ್ಕೆ ಹೇರಿದ್ದಾರೆ.

ಇದರಿಂದ ಕೆರಳಿ ಕೆಂಡವಾಗಿರುವ ಶ್ರೀರಾಮಸೇನೆ ಮುಖಂಡರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘರ್ಷಕ್ಕೆ ಎಡೆಮಾಡಿಕೊಡುವ ನಿಮ್ಮ ನಿಬಂಧನೆಗಳನ್ನು ಕೂಡಲೇ ಹಿಂದೆ ಪಡೆಯಿರಿ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆಯನ್ನು ನೀಡಿರುವ ಸೇನೆಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಇದೊಂದು ಧರ್ಮ ವಿರೋಧಿ ಆದೇಶ ಎಂದು ಕಿಡಿ ಕಾರಿದ್ದಾರೆ.

ನಿಮ್ಮ ಉದ್ದೇಶ ಏನು ದತ್ತಭಕ್ತರು ಮಾಲೆ ಹಾಕಬಾರದು, ದತ್ತಪೀಠಕ್ಕೆ ಬರಬಾರದು, ಶೋಭಾಯಾತ್ರೆ ಮಾಡಬಾರದು ಎಂಬುದೇ ಎಂದು ಪ್ರಶ್ನಿಸಿರುವ ಶ್ರೀರಾಮಸೇನೆ ಮುಖಂಡರು ನಿಮ್ಮಿಂದ ನಾವು ಹೇಳಿಸಿಕೊಳ್ಳಬೇಕಿಲ್ಲ , ಜಿಲ್ಲಾಡಳಿತ ನೀಡಿರುವ ಸೂಚನೆ ಎಷ್ಟು ಸರಿ ಯಾವ ಮಟ್ಟಕ್ಕೆ ನೀವು ಯೋಚನೆ ಮಾಡಿದ್ದೀರಿ ನಾವು ಮಾಡುವುದು ಶೋಭಾಯಾತ್ರೆ ಶವಯಾತ್ರೆ ಅಲ್ಲ ಎಂದು ಗುಡುಗಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ...