Home namma chikmagalur ಯುವ ಉತ್ಸಾಹಿ ಮುಖಂಡನಿಗೆ ಒಲಿದ ತರೀಕೆರೆ ಅಜ್ಜಂಪುರ ತಾಲೂಕು ಅಧ್ಯಕ್ಷ ಪಟ್ಟ
namma chikmagalur

ಯುವ ಉತ್ಸಾಹಿ ಮುಖಂಡನಿಗೆ ಒಲಿದ ತರೀಕೆರೆ ಅಜ್ಜಂಪುರ ತಾಲೂಕು ಅಧ್ಯಕ್ಷ ಪಟ್ಟ

Share
Share

ಚಿಕ್ಕಮಗಳೂರು : ಬಿಲಾಲ್ ಎಂಬ ಹದಿಹರೆಯದ ಯುವಕ ಬಡಜನರಿಗೆ ಏನಾದರೂ ಮಾಡಬೇಕೆಂಬ ಹಂಬಲ ಇರುವ ವ್ಯಕ್ತಿತ್ವ, ಇದಕ್ಕಾಗಿ ಸದಾ ಸಾಮಾನ್ಯ ಜನರ ಮಧ್ಯೆ ಇರುವ ಇವರ ಕನಸು ನನಸಾಗಿಸಲು ಜನರ ಬೆಂಬಲ ಅಗತ್ಯ ಅನಿವಾರ್ಯ ಕೂಡ. ಮಹಮ್ಮದ್ ಬಿಲಾಲ್ ಇವರು ತರೀಕೆರೆಯಲ್ಲಿ ಕೆಮಿಕಲ್ ಅಂಡ್ ಫರ್ಟಿಲೈಸರ್ ಅಂಗಡಿ ತೆಗೆದು ವ್ಯಾಪಾರದ ಜೊತೆಗೆ ಸಮಾಜಸೇವೆ ಮಾಡುತ್ತಾ ಜನರಿಗೆ ಸಹಾಯ ಮಾಡುತ್ತಾ ಬಂದವರು. ಇವರು ಓದುವ ಮಕ್ಕಳಿಗೆ ಮತ್ತು ಅನಾರೋಗ್ಯಪೀಡಿತ ಜನರಿಗೆ ಸಹಾಯ ಮಾಡುತ್ತಾ ಬಂದಿದ್ದು ತರೀಕೆರೆಯಲ್ಲಿ ಸಂಜೀವಿನಿ ಹೆಲ್ತ್ ಕೇರ್ ತೆಗಿದಿದ್ದರ ಪರಿಣಾಮವಾಗಿ ಸಾವಿರಾರು ಜನರಿಗೆ ಅನುಕೂಲವಾಗಿದೆ.

ತಂದೆಯ ನೆರಳಿನಲ್ಲಿ ಸಾಗುತ್ತಿರುವ ಬಿಲಾಲ್ ಎಂಬ ಯುವಕ ಹಗಲಿರುಳು ಜನರಿಗಾಗಿ ದುಡಿಯುತ್ತಿರುವುದು ಎಲ್ಲರಿಗೂ ತಿಳಿದಿದೆ. ಸಂಜೀವಿನಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆದಷ್ಟು ಚಿಕಿತ್ಸೆ ನೀಡಿ ಸಾಧ್ಯವಾಗಿಲ್ಲ ಎಂದರೆ ಮಂಗಳೂರಿನ ಎನ್ ಪೈ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿ ಹಲವರಿಗೆ ಸಹಾಯ ಮಾಡಿ ಅವರು ಬದುಕಿ ಬರುವಂತೆ ಮಾಡಿದ ಸಾಕಷ್ಟು ಪ್ರಕರಣಗಳಿವೆ.

ಬಿಲಾಲ್ ರವರ ಸೇವೆ ಗುರುತಿಸಿ ಇತ್ತೀಚೆಗೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದು ಇವರ ಸೇವೆಗೆ ಸಿಕ್ಕ ಅವಕಾಶ, ಇದನ್ನು ಬಿಲಾಲ್ ಸರಿಯಾಗಿ ಉಪಯೋಗ ಮಾಡಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಮತ್ತಷ್ಟು ಸೇವೆ ಸಲ್ಲಿಸಲಿ ಎಂಬುದು ಅವರ ಸ್ನೇಹಿತರ ಅಂಬೋಣ

ತರೀಕೆರೆ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಉಚಿತ ಅರೋಗ್ಯ ಶಿಬಿರ, ರಕ್ತದಾನ ಶಿಬಿರ, ಅಸಕ್ತರಿಗೆ ಉಚಿತ ಚಿಕಿತ್ಸೆ ಮತ್ತು ಚಿಕಿತ್ಸೆ ಮೊತ್ತ ಕಡಿಮೆ ಮಾಡಿಸಿ ರೋಗಿಗಳ ನೆರವಿಗೆ ಸಹಾಯ ಮಾಡಿರುವ ಶ್ಲಾಘನೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಬಿಲಾಲ್ ಕುಟುಂಬದವರು ಬಡವರ ಪರವಾಗಿ ಸ್ಪಂದಿಸುವುದನ್ನು ಶ್ಲಾಘಿಸಿದರೆ ತಪ್ಪೇನಿಲ್ಲ.

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ...