ಚಿಕ್ಕಮಗಳೂರು :
ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನ ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ 38 ವರ್ಷದ ಮಹಿಳೆ ವನಿತಾ ಎಂದು ಗುರುತಿಸಲಾಗಿದೆ.
ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಚಿಕ್ಕಮಗಳೂರಿನಿಂದ ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ಮಂಜು-ವನಿತಾ ದಂಪತಿ ಕಾರು ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದೆ. ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸ ಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸ ಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ಮಹಿಳೆ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a comment