Home Latest News ದತ್ತಮಾಲೆಗೆ ಚಾಲನೆ : ಶ್ರೀರಾಮಸೇನೆ ಕಾರ್ಯಕರ್ತರಿಂದ ಮಾಲಾಧಾರಣೆ
Latest News

ದತ್ತಮಾಲೆಗೆ ಚಾಲನೆ : ಶ್ರೀರಾಮಸೇನೆ ಕಾರ್ಯಕರ್ತರಿಂದ ಮಾಲಾಧಾರಣೆ

Share
Share

ಚಿಕ್ಕಮಗಳೂರು :

ಕಾಫಿನಾಡಿನಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನದ ಸಂಭ್ರಮ ಏರ್ಪಟ್ಟಿದೆ. ಶ್ರೀರಾಮ ಸೇನೆ ವತಿಯಿಂದ ನಡೆಯುವ 21 ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಇದರೊಂದಿಗೆ ಅಧಿಕೃತ ಚಾಲನೆ ದೊರೆತಿದೆ.

ಕರ್ನಾಟಕದ ಅಯೋಧ್ಯೆ ಎನಿಸಿರುವ ವಿವಾದಿತ ದತ್ತಪೀಠದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನದ ಪ್ರಯುಕ್ತ, ಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನ ಆರಂಭಗೊಂಡಿದೆ.

ಚಿಕ್ಕಮಗಳೂರು ನಗರದ ಶಂಕರಮಠದಲ್ಲಿ ಮಾಲಾಧಾರಣೆ ಮಾಡಲಾಯಿತು. ಇಂದಿನಿಂದ ನವೆಂಬರ್ 10 ವರೆಗೆ ನಡೆಯಲಿರುವ ದತ್ತಮಾಲಾ ಅಭಿಯಾನಕ್ಕೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ‌ ಹಾಕಲಾಯಿತು. ಹಿಂದೂಗಳಿಗೆ ದತ್ತಪೀಠ ನೀಡಬೇಕು ಎಂಬ ಪ್ರಮುಖ ಆಗ್ರಹದೊಂದಿಗೆ ಈ ಬಾರಿಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ನವೆಂಬರ್ 10ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನಕ್ಕೆ ಮಾಲಾಧಾರಿಗಳು ತೆರಳಲಿದ್ದಾರೆ.

2 ದಶಕದ ನಂತರ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯಿಂದ ಈ ಬಾರಿಯ ಅಭಿಯಾನಕ್ಕೆ ಸಾಥ್ ದೊರೆತಿದೆ. ಇದರೊಂದಿಗೆ ಒಗ್ಗಟ್ಟಿನ ಮಂತ್ರವನ್ನು ಈ ಬಾರಿ ನಡೆಯಲಿರುವ ದತ್ತಮಾಲಾ ಅಭಿಯಾನ ಪಡೆದುಕೊಂಡಿದೆ. ಜಿಲ್ಲೆ ಸೇರಿ ರಾಜ್ಯಾದ್ಯಂತ ಇಂದು ದತ್ತ ಭಕ್ತರು ದತ್ತಮಾಲಾಧಾರಣೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ಸುತ್ತಮುತ್ತ ಕೇಸರಿ ಮಯಗೊಳ್ಳಲಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...