Home Latest News ಅಧಿಕಾರಿಗಳು ಸಿಬ್ಬಂದಿ ಸಭೆಗೆ ಗೈರು : ಗ್ರಾ.ಪಂ ನ ಸರ್ವ ಸದಸ್ಯರು ರಾಜೀನಾಮೆ
Latest News

ಅಧಿಕಾರಿಗಳು ಸಿಬ್ಬಂದಿ ಸಭೆಗೆ ಗೈರು : ಗ್ರಾ.ಪಂ ನ ಸರ್ವ ಸದಸ್ಯರು ರಾಜೀನಾಮೆ

Share
Share

ಚಿಕ್ಕಮಗಳೂರು : ಅಧಿಕಾರಿಗಳು ನೌಕರರ ಅಸಹಕಾರ ಹಾಗೂ ಗೈರು ಹಾಜರಿಯಿಂದ ಬೇಸತ್ತು ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಘಟನೆ ಕಳಸ ತಾಲೂಕಿನ ಸಂಸೆಯಲ್ಲಿ ನಡೆದಿದೆ.

3 ಬಾರಿ ಗ್ರಾಮಸಭೆ ಕರೆದರೂ ಸಭೆಯ ದಿನ ಅಧಿಕಾರಿಗಳು ಬರಲ್ಲಿಲ್ಲ ಫೋನ್‌ ನಾಟ್ ರೀಚಬಲ್ ಆಗಿರುತ್ತದೆ ಪಿಡಿಓ, ಕಾರ್ಯದರ್ಶಿ, ಅಕೌಂಟೆಂಟ್, ಇಓ ಯಾರೂ ರೆಸ್ಪಾನ್ಸ್ ಮಾಡ್ತಿಲ್ಲ ಎಂದು ಆರೋಪಿಸಿರು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗಾಗಿ ಅವರು ಹೇಳಿದ ದಿನವೇ ಗ್ರಾಮ ಸಭೆ ಆಯೋಜಿಸಿದ್ದರು ಬರಿತ್ತಿಲ್ಲ, ಈ ನಡುವೆ, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಯಾವುದೇ ಕೆಲಸಗಳು ಆಗ್ತಿಲ್ಲ ಜೊತೆಗೆ ಈಗಾಗಲೇ ಪ್ರಗತಿಯಲ್ಲಿರುವ ಕೆಲಸಗಳಿಗೆ ಹಣ ಕೂಡಾ ಬಿಡುಗಡೆಯಾಗಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ. ಸಂಸೆ ಗ್ರಾಮ ಪಂಚಾಯಿತಿ ಕಳಸ ತಾಲೂಕಿನಲ್ಲೇ ದೊಡ್ಡ ಗ್ರಾಮ ಪಂಚಾಯಿತಿ ನಾವು ಕೆಲಸ ಮಾಡದ ಹಿನ್ನೆಲೆ ಜನರಿಂದ ನಿತ್ಯ ಬೈಸಿಕೊಳ್ತಿವಿ ಎಂದು ತಮ್ಮ ರಾಜೀನಾಮೆ ಗೆ ಕಾರಣ ನೀಡುತ್ತಿದ್ದಾರೆ. ಈ ರೀತಿಯ ಅಧಿಕಾರಿಗಳ ಬೇಜವಾಬ್ದಾರಿಗೆ ಬೇಸತ್ತು ಪಂಚಾಯಿತಿಗೆ ಸಮೂಹಿಕ ರಾಜೀನಾಮೆ ಕೊಟ್ಟಿದ್ದೇವೆ.

ಅಧಿಕಾರಿಗಳು 2 ಪಂಚಾಯಿತಿಗೆ ಕೆಲಸ ಮಾಡುವುದರಿಂದ ಇಂದು ಪಂಚಾಯಿತಿಗೆ ಎಲ್ಲರೂ ಗೈರಾಗಿದ್ದಾರೆ ಎಂಬುದು ಗೊತ್ತಾಗಿದ್ದು ಕೂಡಲೇ ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಬೇಕೆಂದು ಎಲ್ಲರೂ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...