Home Latest News ಶೋಭಾಯಾತ್ರೆ ಹಿನ್ನೆಲೆ ಸಂಪೂರ್ಣ ನಗರ ಖಾಕಿಮಯ : ಗಲ್ಲಿಗಲ್ಲಿಯಲ್ಲೂ ಪೊಲೀಸರ ನಿಯೋಜನೆ
Latest News

ಶೋಭಾಯಾತ್ರೆ ಹಿನ್ನೆಲೆ ಸಂಪೂರ್ಣ ನಗರ ಖಾಕಿಮಯ : ಗಲ್ಲಿಗಲ್ಲಿಯಲ್ಲೂ ಪೊಲೀಸರ ನಿಯೋಜನೆ

Share
Share

ಚಿಕ್ಕಮಗಳೂರು : ಚಿಕ್ಕಮಗಳೂರು ನಗರ ಹಾಗೂ ವಿವಾದಿತ ಐ.ಡಿ ಪೀಠ ಮಾರ್ಗ ಸಂಪೂರ್ಣ ಕೇಸರಿ ಹಾಗೂ ಖಾಕಿಮಯವಾಗಿದೆ. ನಗರದ ಎಲ್ಲೆಲ್ಲೂ ಪೊಲೀಸರೇ ಕಾಣಿಸುತ್ತಿದ್ದು ನಾಳಿನ ಕಾರ್ಯಕ್ರಮಕ್ಕೆ ಎಲ್ಲಿಲ್ಲದ ಭದ್ರತೆ ಒದಗಿಸಲಾಗಿದೆ.

ಕಾಫಿನಾಡಲ್ಲಿ ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನದ ಅಂಗವಾಗಿ ನಾಳೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರ ಹಾಗೂ ದತ್ತಪೀಠ ಸುತ್ತಮುತ್ತ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಈ ಮೂಲಕ ಕಾಫಿನಾಡಿನಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ. ನಾಳೆ ಸಾವಿರಾರು ಭಕ್ತರಿಂದ‌ ಶಂಕರಮಠ ಬಳಿ ಧರ್ಮಸಭೆ ನಂತರ ಶೋಭಾಯಾತ್ರೆ ಹಾಗೂ ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಇರುವುದರಿಂದ ಜಿಲ್ಲೆ ಹಾಗೂ ಚಿಕ್ಕಮಗಳೂರು ತಾಲೂಕಿನಾದ್ಯಂತ ಖಾಕಿ ಹದ್ದಿನ ಕಣ್ಣು ಇಟ್ಟಿದೆ.

ದತ್ತಪೀಠ ಹಾಗೂ ಚಿಕ್ಕಮಗಳೂರು ನಗರದಲ್ಲಿ 1700ಕ್ಕೂ ಅಧಿಕ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿದೆ. ಓರ್ವ ಎಸ್ಪಿ, ಓರ್ವ ಅಡಿಷನಲ್ ಎಸ್ಪಿ, 6 ಡಿವೈಎಸ್ಪಿ,15 ಸಿಪಿಐ ಸೇರಿದಂತೆ 100 ಜನ ಪಿಎಸ್ಐ, 1500 ಸಿವಿಲ್ ಪೊಲೀಸರು ಹಾಗೂ 8 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ
11 ಡಿಎಆರ್ ತುಕಡಿ ಕ್ಯೂ.ಆರ್.ಟಿ. ಟೀಂಗಳು, 2 ಎಸಿ ಟೀಂಗಳಿಂದ ಬಂದೋಬಸ್ತ್ ಏರ್ಪಟ್ಟಿದೆ.

ವಿಶೇಷವಾಗಿ ದತ್ತಪೀಠ ಮಾರ್ಗದ ಸೂಕ್ಷ್ಮ ಪ್ರದೇಶದಲ್ಲಿ ಸಿಸಿಟಿವಿ ಗಳನ್ನು ಅಳವಡಿಕೆ ಮಾಡಲಾಗಿದೆ.
ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಡ್ರೋನ್ ಕ್ಯಾಮರಾಗಳನ್ನು ಸಹ ಬಳಕೆ ಮಾಡಲಾಗಿದೆ, ಅಲ್ಲದೇ
ಬಾಟಲಿಗೆ ಪೆಟ್ರೋಲ್ ಕೊಡದಂತೆ ಬಂಕ್ ಮಾಲೀಕರಿಗೆ ನೋಟೀಸ್ ನೀಡಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ವಿವಾದಿತ ದತ್ತಪೀಠದಲ್ಲಿ ನಡೆಯುವ ದತ್ತಮಾಲಾ ಕಾರ್ಯಕ್ರಮ ಸಂಪೂರ್ಣ ಕೇಸರಿ ಮತ್ತು ಖಾಕಿಮಯವಾಗಿದೆ. ಆದರೆ ಇಷ್ಟೊಂದು ಪೊಲೀಸರ ಅವಶ್ಯಕತೆ ಇತ್ತಾ ಎಂದು ಕೆಲವರು ಇಲಾಖೆಯ ವಿರುದ್ಧ ಮಾತನಾಡಿಕೊಳ್ಳುತ್ತಿದ್ದುದು ಕಂಡು ಬಂತು

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...