Home Latest News ನಕ್ಸಲರಿಗಾಗಿ ಆಂಬುಸ್ ಆಪರೇಷನ್ : ಸುಬ್ಬೇಗೌಡ ಕುಟುಂಬದ ತೀವ್ರ ವಿಚಾರಣೆ
Latest News

ನಕ್ಸಲರಿಗಾಗಿ ಆಂಬುಸ್ ಆಪರೇಷನ್ : ಸುಬ್ಬೇಗೌಡ ಕುಟುಂಬದ ತೀವ್ರ ವಿಚಾರಣೆ

Share
Share

ಚಿಕ್ಕಮಗಳೂರು :

ನಕ್ಸಲರು ಭೇಟಿ ಬೆನ್ನಲ್ಲೇ ಮಲೆನಾಡಿನಲ್ಲಿ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ.‌ ಮುಂಡಗಾರು ಲತಾ ತಂಡ ಊಟ ಮಾಡಿ ತೆರಳಿದ್ದ ಕಡೇಗುಂದಿ ಸುಬ್ಬೇಗೌಡರ ಕುಟುಂಬವನ್ನೂ ಕೂಡ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಮಲೆನಾಡ ಕಾಡಂಚಿನ ಕುಗ್ರಾಮಕ್ಕೆ ನಕ್ಸಲರ ಭೇಟಿ ಹಿನ್ನೆಲೆ ಎಎನ್ಎಫ್ ತನ್ನ ಕಾರ್ಯಾಚರಣೆ ತೀವ್ರಗೊಳಿಸಿದೆ.‌ ನಕ್ಸಲರು ಊಟ ಮಾಡಿ ಹೋಗಿದ್ದ ಮನೆಯವರನ್ನು ವಿಚಾರಣೆ ಮಾಡಲಾಗುತ್ತಿದೆ. ಗನ್ ತೋರಿಸಿ ಬೆದರಿಸಿ ಸುಬ್ಬೇಗೌಡ ಮನೆಯಲ್ಲಿ ಊಟ ಮಾಡಿ ಹೋಗಿದ್ದ ನಕ್ಸಲರು ಬಂದು ಹೇಗೆ ವರ್ತಿಸಿದರು ಎಂದು ಪ್ರಶ್ನೆ ಮಾಡಿದ್ದಾರೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಡೇಗುಂದಿ ಗ್ರಾಮದ ಸುಬ್ಬೇಗೌಡರ ಮನೆಗೆ ಪೊಲೀಸ್ ನಕ್ಸಲ್ ನಿಗ್ರಹ ದಳದ ಸರ್ಪಗಾವಲು ಹಾಕಲಾಗಿದೆ. ಈ ಪ್ರಕರಣದ ತನಿಖಾಧಿಕಾರಿ ಆಗಿರುವ ಕೊಪ್ಪ ಡಿ.ವೈ.ಎಸ್ಪಿ. ಬಾಲಾಜಿ ಯವರು ವಿಚಾರಣೆ ನಡೆಸುತ್ತಿದ್ದಾರೆ. ಆ ದಿನ ರಾತ್ರಿ ಎಷ್ಟು ಜನ ಬಂದಿದ್ರು, ಅವರತ್ರ ಏನೇನಿತ್ತು, ಏನು ಹೇಳಿದ್ರು, ಏನು ಕೇಳಿದ್ರು… ಅಡುಗೆ ಏನು ಮಾಡಿದ್ರಿ, ಎಷ್ಟು ಜನಕ್ಕೆ ಮಾಡಿದ್ರಿ ಎಂಬೆಲ್ಲಾ ವಿಷಯ ಕಲೆ ಹಾಕಿ ವಿವಿಧ ಆಯಾಮಗಳಲ್ಲಿ ಹಾಗೂ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಿದ್ದಾರೆ. ಸುಬ್ಬೇಗೌಡ ಮನೆಯ ಸದಸ್ಯರ ವಿಚಾರಣೆ ಮಾಹಿತಿಯ ಮೇಲೆ ತನಿಖೆ ಚುರುಕುಗೊಳಿಸಿದ ಪೊಲೀಸರು ನಕ್ಸಲರು ಹೋದ ಮಾರ್ಗದಲ್ಲಿ ನಿರಂತರ ಕೂಂಬಿಂಗ್ ನಡೆಸ್ತಿದ್ದಾರೆ ಪೊಲೀಸ್- ಹಾಗೂ ಎ.ಎನ್.ಎಫ್ ತಂಡಗಳು ಕಾರ್ಯ ಪ್ರವೃತ್ತರಾಗಿದ್ದು ನಕ್ಸಲರು ಊಟ ಮಾಡಿ ಹೋಗುವಾಗ ಪೊಲೀಸ್ ಬರ್ತಾರೆಂದು ಗನ್ ಬಿಟ್ಟು ಹೋಗಿದ್ದ ಬಗ್ಗೆ ಕುತೂಹಲಕಾರಿ ಪ್ರಶ್ನೆ ಮುಂದಿಟ್ಟರು ಎಂದು ತಿಳಿದು ಬಂದಿದೆ.

ಒಟ್ಟಿನಲ್ಲಿ ದಶಕಗಳಿಂದ ಇಲ್ಲದ ನಕ್ಸಲರ ಆಗಮನದಿಂದ ಪೊಲೀಸ್, ಎ.ಎನ್.ಎಫ್. ಹೈ ಅಲರ್ಟ್ ಆಗಿದ್ದಾರೆ. ಚಿಕ್ಕಮಗಳೂರು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಅರಣ್ಯಗಳಲ್ಲಿ ಆಂಬುಸ್ ಆಪರೇಷನ್ ಗೆ ಇಳಿದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ...