Home Latest News ಬೀಟಮ್ಮ ಕಾಡಾನೆ ಗ್ಯಾಂಗ್ ಸ್ಥಳಾಂತರಿಸಿ ಇಲ್ಲವೇ ಧರಣಿ ಸತ್ಯಾಗ್ರಹ ಎದುರಿಸಿ : ರೈತ ಮುಖಂಡ ಗುರುಶಾಂತಪ್ಪ
Latest News

ಬೀಟಮ್ಮ ಕಾಡಾನೆ ಗ್ಯಾಂಗ್ ಸ್ಥಳಾಂತರಿಸಿ ಇಲ್ಲವೇ ಧರಣಿ ಸತ್ಯಾಗ್ರಹ ಎದುರಿಸಿ : ರೈತ ಮುಖಂಡ ಗುರುಶಾಂತಪ್ಪ

Share
Share

ಚಿಕ್ಕಮಗಳೂರು : ಬಿಟಮ್ಮ ಗ್ಯಾಂಗ್ ನ ಕಾಡಾನೆಗಳು ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಬೇಡು ಬಿಟ್ಟಿದ್ದು ಹತ್ತಾರು ಎಕರೆ ಕಾಫಿ ತೋಟ ಸರ್ವನಾಶ ಮಾಡುತ್ತಿವೆ ಕೂಡಲೇ ಆನೆಗಳನ್ನು ಸ್ಥಳಾಂತರಿಸಬೇಕು. ನಾಲ್ಕು ದಿನಗಳಲ್ಲಿ ಸ್ಥಳಾಂತರ ಮಾಡದಿದ್ದರೆ ಅರಣ್ಯ ಇಲಾಖೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಎಚ್ಚರಿಕೆ ನೀಡಿದ್ದಾರೆ.

ಕಳೆದ 15 ದಿನಗಳಿಂದ ಬೀಟಮ್ಮ ಕಾಡಾನೆ ಅದರ ತಂಡದ ಜೊತೆ ಚಿಕ್ಕಮಗಳೂರು ಹೊರವಲಯದ ಕೆ.ಆರ್ ಪೇಟೆ ಆಲದಗುಡ್ಡೆ ಸುತ್ತಮುತ್ತ ಬೀಡು ಬಿಟ್ಟಿದ್ದು ಮೊನ್ನೆ ಕೆಸವಿನಮನೆ ಬೈರೇಗೌಡರ ಕಾಫಿ ತೋಟವನ್ನು ಬೇರು ಸಹಿತ ಕಿತ್ತು ಹಾಕಿದ್ದು ಸಾವಿರಾರು ಕಾಫಿ ಗಿಡಗಳನ್ನು ಸರ್ವನಾಶ ಮಾಡಿವೆ‌. ಇದಕ್ಕೆ ಅರಣ್ಯ ಇಲಾಖೆಯೇ ನೇರ ಹೊಣೆ ಆಗಿದ್ದು ಬೈರೇಗೌಡರ ತೋಟದಲ್ಲೇ ದಿನಗಟ್ಟಲೆ ದಿಗ್ಬಂದನ ಹಾಕಿ ಆನೆಗಳನ್ನು ಓಡಿಸದೆ ಇದ್ದುದ್ದೆ ಕಾರಣ ಎಂದು ರೈತ ಮುಖಂಡರು ಆರೋಪಿಸಿದರು.

ಈ ನಡುವೆ ಆಲ್ದೂರು ವಲಯದ ಫಾರೆಸ್ಟರ್ ರಮೇಶ್ ರೈತರಿಗೆ ಉಡಾಫೆ ಉತ್ತರ ಕೊಟ್ಟು ಅರ್ಜಿ ಕೊಡಿ ನಂತರ ಪರಿಶೀಲನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ‌ಬೀಟಮ್ಮ ಗ್ಯಾಂಗ್ ನಲ್ಲಿ 26 ಆನೆಗಳ ಜೊತೆ ಮರಿ ಆನೆಯೊಂದು ಬೀಡು ಬಿಟ್ಟಿದ್ದು ಅದನ್ನು ಓಡಿಸದಂತೆ ನಮಗೆ ನಿರ್ದೇಶನವಿದೆ ಎನ್ನುತ್ತಾರೆ ಎಂದು ರೈತರು ಅಳಲು ತೋಡಿಕೊಂಡರು.

ಈ ಕೂಡಲೇ ವೈಜ್ಞಾನಿಕ ರೀತಿಯಲ್ಲಿ ಕಾಡಾನೆಗಳನ್ನು ಸ್ಥಳಾಂತರ ಮಾಡಬೇಕು ಜೊತೆಗೆ ಆನೆಗಳು ಉಂಟು ಮಾಡಿರುವ ಹಾನಿಗೆ ವೈಜ್ಞಾನಿಕ ಪರಿಹಾರ ಕೊಡಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದೇ ವೇಳೆ ಮಾತನಾಡಿದ ಗುರು ಶಾಂತಪ್ಪ ಚಿಕ್ಕಮಗಳೂರು ಹಾಗೂ ಮೂಡಿಗೆರೆ, ಎರಡು ಕ್ಷೇತ್ರದ ಶಾಸಕರು ಈ ಬಗ್ಗೆ ಗಮನ ಹರಿಸದೆ ಬೇಜವಾಬ್ದಾರಿ ತೋರಿದ್ದಾರೆ ತಮಗೆ ಲಾಭವಾಗುವ ಕಡೆ ಮಾತ್ರ ಅವರು ಇರುತ್ತಾರೆ ಎಂದು ಆರೋಪಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....