ಚಿಕ್ಕಮಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ್ದಕ್ಕೆ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ತಾಲೂಕು ಕಚೇರಿಯಿಂದ ಹನುಮಂತಪ್ಪ ಸರ್ಕಲ್ ವರೆಗೂ ಮೆರವಣಿಗೆಯಲ್ಲಿ ಬಂದು ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.
ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಿ.ಎಂ ಸಿದ್ದರಾಮಯ್ಯ ಡಿ.ಸಿಎಂ ಡಿ.ಕೆ ಶಿವಕುಮಾರ್ ಪರ ಜೈಕಾರ ಹಾಕಿದರು. ಶಾಸಕ ತಮ್ಮಯ್ಯ ಸಿ.ಡಿ.ಎ ಅಧ್ಯಕ್ಷ ನಯಾಜ್ ಅಹ್ಮದ್ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಬಿ.ಬಿ ನಿಂಗಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು. ವೃತ್ತದ ಸುತ್ತಲೂ ಜಮಾಯಿಸಿದ ಕಾರ್ಯಕರ್ತರು ಜೈ ಕಾಂಗ್ರೆಸ್ ಜೈ ರಾಹುಲ್ ಗಾಂಧಿ ಜೈ ಮಲ್ಲಿಕಾರ್ಜುನ ಖರ್ಗೆ ಎಂದು ಘೋಷಣೆ ಕೂಗಿ ಸಂತಸ ಹಂಚಿ ಕೊಂಡರು.
ಇದೇ ವೇಳೆ ಮಾತನಾಡಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂಎಲ್ ಮೂರ್ತಿ ನಿರೀಕ್ಚೆಗೂ ಮೀರಿ ಫಲಿತಾಂಶ ಬಂದಿದ್ದು ಕಾಂಗ್ರೆಸ್ ಪಕ್ಷಕ್ಕೆ ಇದೀಗ ಜವಾಬ್ದಾರಿ ಹೆಚ್ಚಾಗಿದೆ ನಾವು ಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು, ನೈತಿಕತೆಯ ಬಗ್ಗೆ ಮಾತನಾಡುತ್ತಿದ್ದ ಎಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ್ ಬೊಮ್ಮಾಯಿ ತಮ್ಮ ಮಕ್ಕಳನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ ಅವರಿಬ್ಬರೂ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಎಂಎಲ್ ಮೂರ್ತಿ ಒತ್ತಾಯಿಸಿದರು.
Leave a comment