Home Latest News ಚಿಕ್ಕಮಗಳೂರು ನಗರಠಾಣೆ ಇನ್ಸ್ ಪೆಕ್ಟರ್ ಸಸ್ಪೆಂಡ್
Latest News

ಚಿಕ್ಕಮಗಳೂರು ನಗರಠಾಣೆ ಇನ್ಸ್ ಪೆಕ್ಟರ್ ಸಸ್ಪೆಂಡ್

Share
Share

ಚಿಕ್ಕಮಗಳೂರು : ಕರ್ತವ್ಯಲೋಪ ಹಿನ್ನೆಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಮಾನತು ಗೊಂಡಿದ್ದಾರೆ. ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಸಸ್ಪೆಂಡ್ ಆಗಿದ್ದು ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿ ರೇಣುಕಾ ಪ್ರಸಾದ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು.

ಎರಡು ದಿನಗಳ ಹಿಂದೆ ಸಚಿವ ಕೆ.ಜೆ.ಜಾರ್ಜ್ ನಗರದ ಎಐಟಿ ವೃತ್ತದಲ್ಲಿ ಬಳಿ ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನಾ ಕಾರ್ಯಕ್ರಮದ ವೇಳೆ ಅವರ ಭಾಷಣಕ್ಕೆ ಅಡ್ಡಿ ಪ್ರಕರಣ ಸೇರಿದಂತೆ ದನಗಳ್ಳರು ಪೊಲೀಸರಿಗೆ ಮಚ್ಚು ತೋರಿಸಿದ್ದು ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆತ ಪ್ರಕರಣ ವಕೀಲರು ಪೊಲೀಸರ ನಡುವಿನ ಸಂಘರ್ಷ ಸೇರಿ ಹಲವು ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ರೇಣುಕಾ ಪ್ರಸಾದ್ ಮೇಲಿತ್ತು.

ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಿದ ನಂತರ ಈ ಆದೇಶ ಹೊರಬಿದ್ದಿದೆ.ಅಷ್ಟೇ ಅಲ್ಲದೇ ಇನ್ನು ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ಹೊರಡಿಸಿದ್ದಾರೆ. ಸದ್ಯ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಆಗಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ರನ್ನು ಪ್ರಭಾರ ಆಗಿ ನಿಯೋಜಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...