Home Latest News ದತ್ತಜಯಂತಿ ಹಿನ್ನೆಲೆ ನಾಳೆ ನಗರ ಅಲಂಕಾರಕ್ಕೆ ಚಾಲನೆ
Latest News

ದತ್ತಜಯಂತಿ ಹಿನ್ನೆಲೆ ನಾಳೆ ನಗರ ಅಲಂಕಾರಕ್ಕೆ ಚಾಲನೆ

Share
Share

ಚಿಕ್ಕಮಗಳೂರು: ದತ್ತಮಾಲಾ ಅಭಿಯಾನಕ್ಕೆ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿಯ ದತ್ತ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ನಿರ್ಧರಿಸಿದೆ. ನಾಳೆ ಸಂಜೆ 7ಕ್ಕೆ ಗೆ ಚಿಕ್ಕಮಗಳೂರು ನಗರದ ಅಲಂಕಾರದ ಉದ್ಘಾಟನೆ ನಡೆಯಲಿದೆ ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ಶಾಮ್ ವಿ ಗೌಡ ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದತ್ತಮಾಲಾ ಅಭಿಯಾನ ಡಿಸೆಂಬರ್ 6 ರಿಂದ ಆರಂಭಗೊಳ್ಳಲಿದ್ದು, 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ದತ್ತ ಜಯಂತಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಚಿಕ್ಕಮಗಳೂರಿನ ಪ್ರತಿ ಹಿಂದೂಖಹ ಮನೆ ಹಾಗೂ ಕಟ್ಟಡಗಳ ಮೇಲೆ ಕೇಸರಿ ಧ್ವಜವನ್ನು ಹಾರಿಸಿ, ನಗರದ ಎಲ್ಲಾ ವಾರ್ಡ್ಗಳಲ್ಲಿ ದತ್ತ ಜಯಂತಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಲಂಕಾರ ಮಾಡಲಾಗುವುದು.

ಕೇಸರಿ ಬಂಟಿಂಗ್ಸ್ ಹಾಗೂ ದ್ವಜಗಳಿಂದ ಇಡೀ ನಗರವನ್ನ ಕೇಸರಿಮಯಗೊಳಿಸಲಾಗುವುದು, ಜೊತೆಗೆ ಡಿಸೆಂಬರ್ 13ರಂದು ನಡೆಯುವ ಬೃಹತ್ ಶೋಭ ಯಾತ್ರೆ ಸಂಚರಿಸುವ ಮಾರ್ಗದಲ್ಲಿ ಸಂಪೂರ್ಣ ಕೇಸರಿಮಯ ಮಾಡಲಾಗುವುದು ಎಂದು ಶ್ಯಾಮ್ ತಿಳಿಸಿದ್ದಾರೆ. ಹಿಂದೂದು ಕಾರ್ಯಕರ್ತರಲ್ಲಿ ಧಾರ್ಮಿಕ ಭಾವನೆಗಳ ಜೊತೆ ಆಧ್ಯಾತ್ಮಿಕ ಭಾವನೆಗಳನ್ನು ಜೋಡಿಸುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...