ಚಿಕ್ಕಮಗಳೂರು : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಇಂದು ಸಂಜೆ ಕಾಡಾನೆಯೊಂದು ಉಮೇಶ್ ಎಂಬುವವರನ್ನು ಬಲಿಪಡಿತ್ತು. ವಿಷಯ ತಿಳಿಯುತ್ತಿದಂತೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹಲವು ಬೇಡಿಕೆಗಳನ್ನು ಗ್ರಾಮಸ್ಥರು ಹಾಗೂ ಉಮೇಶ್ ಕುಟುಂಬದವರು ಶಾಸಕರ ಮುಂದಿಟ್ಟು ಮೃತದೇಹ ತೆಗೆಯದೆ ಪಟ್ಟು ಹಿಡಿದು ಕುಳಿತಿದ್ದರು.
ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಮಾತನಾಡಿದ ಶಾಸಕ ಟಿ.ಡಿ ರಾಜೇಗೌಡ
ಉಮೇಶ್ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ಪರಿಹಾರ ಅರಣ್ಯ ಇಲಾಖೆಯಿಂದ 5 ಲಕ್ಷ ಶಾಸಕರ ನಿಧಿಯಿಂದ ಒಂದು ಲಕ್ಷ ಅನುದಾನ ಹಾಗೂ ಅರಣ್ಯಾಧಿಕಾರಿಗಳು ಉಮೇಶ್ ಕುಟುಂಬಕ್ಕೆ ಗುತ್ತಿಗೆ ಆಧಾರದಲ್ಲಿ ನೌಕರಿ ನೀಡುತ್ತೇವೆ ಎಂಬ ಭರವಸೆ ನೀಡಿದ ಬಳಿಕ ಮೃತದೇಹವನ್ನು ಸ್ಥಳದಿಂದ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ಬಲಿ ಪಡಿದ ಆನೆಯನ್ನು ಸ್ಥಳಾಂತರ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುದಾಗಿ ಶಾಸಕ ರಾಜೇಗೌಡ ತಿಳಿಸಿದ್ದಾರೆ.
Leave a comment