ಚಿಕ್ಕಮಗಳೂರು: ದೇಶದ ಬಂಗಾಳಕೊಲ್ಲಿ ಸಮುದ್ರ ವಲಯದಲ್ಲಿ ಪೆಂಗಲ್ ಚಂಡಮಾರುತದ ವೇಗ ಹೆಚ್ಚಾದ ಹಿನ್ನಲೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಭಾಗದಲ್ಲೂ ನಾಳೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಿಸಿ ಆದೇಶಿಸಿದ್ದಾರೆ.
ಮಂಗಳವಾರ ಒಂದು ದಿನ ರಜೆ ಘೋಷಣೆ ಮಾಡಿದ್ದು, ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ, ಹಾಸನ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸಣ್ಣ ಪ್ರಮಾಣದ ಸಾಧಾರಣ ಮಳೆಯಾಗುತ್ತಿದ್ದು, ಇಡೀ ದಿನ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ತಣ್ಣನೆಯ ಮೋಡಕವಿದ ವಾತಾವರಣ ಸೃಷ್ಟಿಯಾಗಿದ್ದು, ಮಿತಿಮೀರಿದ ಚಳಿ ಜನರನ್ನು ಮನೆಯಿಂದ ಹೊರಗೆ ಬಾರದಂತೆ ಮಾಡಿದೆ.
Leave a comment