Home Latest News ಫೆಂಗಲ್ ಚಂಡಮಾರುತ : ಜಿಲ್ಲೆಯಾದ್ಯಂತ ಮಳೆ ಆರ್ಭಟ
Latest News

ಫೆಂಗಲ್ ಚಂಡಮಾರುತ : ಜಿಲ್ಲೆಯಾದ್ಯಂತ ಮಳೆ ಆರ್ಭಟ

Share
Share

ಚಿಕ್ಕಮಗಳೂರು : ನಿರೀಕ್ಷೆಯಂತೆ ಫೆಂಗಲ್ ಚಂಡಮಾರುತದ ಎಫೆಕ್ಟ್ ಜಿಲ್ಲೆಯಲ್ಲಿ ಮಳೆ ಆರ್ಭಟ ತಂದಿದೆ.
ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದೆ, ಅದರಲ್ಲೂ ಕೊಟ್ಟಿಗೆಹಾರ ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆ ಬೀಳುತ್ತಿದೆ.‌

ಚಿಕ್ಕಮಗಳೂರು ನಗರದಲ್ಲೂ ಕೂಡ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನದ ಅಸ್ತವ್ಯಸ್ತಗೊಂಡಿದೆ, ಬೆಳಗ್ಗೆ ಯಿಂದಲೂ ಮಲೆನಾಡಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆ ಬಳಿಕ ಮಲೆ‌ನಾಡಿನ ಹಲವು ಭಾಗದಲ್ಲಿ ದಿಢೀರ್ ಧಾರಾಕಾರ ಮಳೆಯಾಗಿದೆ.‌ ಭಾರೀ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಮಳೆಯ ಕಾರಣ ಕೊಯ್ಲಿಗೆ ಬಂದಿರೋ ಕಾಫಿ ಹಾನಿಯಾಗುತ್ತಿರುವುದನ್ನು ಕಂಡು ಬೆಳೆಗಾರರು ಕಂಗಾಲಾಗಿದ್ದಾರೆ.

ಡಿಸೆಂಬರ್ ತಿಂಗಳಲ್ಲಿ ಬಿದ್ದಿರುವ ಈ ಮಳೆ ಕಾಫಿ ಮೇಲಂತು ತೀರ ವ್ಯತಿರಿಕ್ತ ಪರಿಣಾಮ ಬೀರಿದೆ. ಚಿಕ್ಕಮಗಳೂರು ಮೂಡಿಗೆರೆ ತಾಲೂಕುಗಳಲ್ಲಿ ಅಲ್ಲದೇ ಬೇರೆ ತಾಲ್ಲೂಕಿನ ಕೆಲವೆಡೆ ಸಹಾ ವರುಣ ಅಬ್ಬರಿಸಿದ್ದಾನೆ, ಮುನ್ಸೂಚನೆಯಂತೆ ನಾಳೆ ಶಾಲೆಗಳಗೆ ರಜೆ ಘೋಷಿಸಿದ್ದ ಜಿಲ್ಲಾಡಳಿತ ಬೇರೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ .

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....