Home Latest News KSRTC ಡಿ.ಸಿ ಅಮಾನತಿಗೆ ಶಿಫಾರಸ್ಸು : ಪುಷ್ಪ ಅಮರನಾಥ್
Latest News

KSRTC ಡಿ.ಸಿ ಅಮಾನತಿಗೆ ಶಿಫಾರಸ್ಸು : ಪುಷ್ಪ ಅಮರನಾಥ್

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಕೆ.ಎಸ್.ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಹಗಲು ದರೋಡೆ ನಡೆಯುತ್ತಿದ್ದು ಮಹಿಳೆಯರಿಗೆ ಹಾಲುಣಿಸುವ ಕೊಠಡಿಯು ಇಲ್ಲದಂತಾಗಿದ್ದು, ಶೌಚಾಲಯ ನಿರ್ವಹಣೆಯಲ್ಲಿ ಅಕ್ರಮ ಎಸಗಿದ್ದು ಇದಕ್ಕೆಲ್ಲ ವಿಭಾಗಿಯ ನಿಯಂತ್ರಣ ಅಧಿಕಾರಿಯೇ ಕಾರಣ ಇವರಿಂದ ವರದಿ ಕೇಳಿರುವುದಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಪುಷ್ಪ ಅಮರನಾಥ್ ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಪುಷ್ಪ ಅಮರನಾಥ್, ಚಿಕ್ಕಮಗಳೂರು ಕೆ.ಎಸ್.ಆರ್ ಟಿ.ಸಿ ಡಿಸಿ ಜಗದೀಶ್ ಬೇಜವಾಬ್ದಾರಿ ಹಾಗೂ ನಿರ್ಲಕ್ಷದಿಂದ ಬಸ್ ನಿಲ್ದಾಣ ಅವ್ಯವಹಾರಗಳ ಆಗರವಾಗಿದ್ದು ಇದನ್ನು ಸಹಿಸಲು ಸಾಧ್ಯವೇ ಇಲ್ಲ. ತಾಯಿ ಮಡಿಲು ಕೇಂದ್ರ ಗೋಡೌನ್ ಆಗಿ ಮಾರ್ಪಟ್ಟಿದ್ದು, ಮಹಿಳೆಯರ ಶೌಚಾಲಯಕ್ಕೆ ಹತ್ತು ರೂಪಾಯಿ ಪಡೆಯುತ್ತಾರೆ, ಅಲ್ಲಿ ನಾಮಫಲಕವನ್ನು ಕೂಡ ಅಳವಡಿಸಿಲ್ಲ. ಇದು ಅಪರಾಧವಾಗಿದ್ದು ಈ ಎಲ್ಲಾ ಕಾರ್ಯಗಳು ಡಿಸಿ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದು, ಅವರನ್ನು ಅವರನ್ನು ವರ್ಗಾವಣೆಗೆ ಶಿಫಾರಸ್ಸು ಮಾಡುತ್ತೇನೆ ಎಂದರು.

ಮಂಗಳವಾರ ಬೆಳಗ್ಗೆ ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಪುಷ್ಪ ಅಮರನಾಥ್ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ಈ ವೇಳೆ ಮಹಿಳೆಯೊಬ್ಬರು ಆಧಾರ್ ಕಾರ್ಡ್ ಇಲ್ಲ ಎಂದಾಗ, ಗುರುತದ ಚೀಟಿ ಇಲ್ಲದೆಯೂ ಪ್ರಯಾಣಿಸಬಹುದು ಎಂದು ತಿಳಿಸಿರುವುದಾಗಿ ಮಾಹಿತಿ ನೀಡಿದರು. ಅಲ್ಲದೆ ನಿರ್ವಾಹಕರು ಮಹಿಳೆಯರ ಜೊತೆ ವರ್ತನೆ ಸರಿಗೊಳಿಸುವ ಕುರಿತು ಸೂಚನೆ ನೀಡಲಾಗಿದೆ‌. ಜೊತೆಗೆ ನಿರ್ವಾಹಕರ ಜೊತೆಗೆ ಒಂದು ದಿನದ ಶಿಬಿರ ಹಮ್ಮಿಕೊಂಡು ಹಲವು ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದರು.

ಇದೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಜನರು ಮೆಚ್ಚುಗೆಯ ಮಾತುಗಳನ್ನು ಆಡಿದರು, ಆದರೆ ಅಧಿಕಾರಿಗಳ ಅಸಡ್ಡೆ ಹಾಗೂ ನಿರ್ಲಕ್ಷ ಧೋರಣೆಯಿಂದ ಯೋಜನೆ ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದರು. ಗ್ಯಾರಂಟಿ ಅನುಷ್ಠಾನ ಸಮಿತಿಯು ರಾಜ್ಯದಲ್ಲೆಡೆ ಸೈನ್ಯದಂತೆ ಕಾರ್ಯ ನಿರ್ವಹಿಸುತ್ತಿದೆ ‌. ಜಿಲ್ಲಾ ಮಟ್ಟದ ತಂಡ ಕೂಡ ಸಕ್ರಿಯವಾಗಿದ್ದು, ಜನರಲ್ಲಿ ಅಡಗಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚೆಯಾಗಿದ್ದು, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಲಾಗುವುದು ಎಂದರು.

ಡಿಸೆಂಬರ್ 5ರ ಹಾಸನ ಸ್ವಾಭಿಮಾನಿ ಸಮಾವೇಶ ಮೂರೂ ಕ್ಷೇತ್ರಗಳ ಉಪಚುನಾವಣೆ ವಿಜಯೋತ್ಸವ ಆಗಿದ್ದು, ಗೆಲುವಿನ ಸಂಭ್ರಮವನ್ನು ಆಚರಿಸುತ್ತಿದ್ದೇವೆ. ಚಿಕ್ಕಮಗಳೂರಿನಿಂದ ಅತಿ ಹೆಚ್ಚು ಜನರು ಹಾಗೂ ಕಾರ್ಯಕರ್ತರು ಆಗಮಿಸಬೇಕೆಂದು ಅವರು ಮನವಿ ಮಾಡಿದರು.

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...