Home Political News ಚಿಕ್ಕಮಗಳೂರು ನಗರಸಭೆಯಲ್ಲಿ ಕೋಲಾಹಲ ಎಬ್ಬಿಸಿದ ತುರ್ತುಸಭೆ
Political News

ಚಿಕ್ಕಮಗಳೂರು ನಗರಸಭೆಯಲ್ಲಿ ಕೋಲಾಹಲ ಎಬ್ಬಿಸಿದ ತುರ್ತುಸಭೆ

Share
Share

ಚಿಕ್ಕಮಗಳೂರು :ನಗರಸಭೆಯಲ್ಲಿ ಇಂದು ಆಡಳಿತರೂಡ ಬಿಜೆಪಿ ಅಧ್ಯಕ್ಷೆ ಸುಜಾತ ಶಿವಕುಮಾರ್ ವಿರುದ್ಧ ಕಾಂಗ್ರೆಸ್ ಸದಸ್ಯರು ಮುಗಿ ಬಿದ್ದಿದ್ದರು. ತುರ್ತು ಸಾಮಾನ್ಯ ಸಭೆಯನ್ನು ಬಿಲ್ ಪಾಸ್ ಮಾಡಿಕೊಳ್ಳಲು ಕರೆಯಲಾಗಿದೆ ಎಂದು ಪ್ರತಿ ಪಕ್ಷಗಳು ಕೋಲಾಹಲ ಎಬ್ಬಿಸಿದ್ದರು. ಸಭೆ ಆರಂಭ ವಿಳಂಬಕ್ಕೆ ಗರಂ ಆಗಿದ್ದ ಕೈ ಸದಸ್ಯರು ಲೂಟಿ ಲೂಟಿ ಎಂದು ಘೋಷಣೆ ಕೂಗಿದರು. ನಗರದಲ್ಲಿ ಗುಂಡಿ ಮುಚ್ಚಲು 50 ಲಕ್ಷ ಟೆಂಡರ್ ಕರೆದಿದ್ದು ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ. ಅಲ್ಲದೇ ನಗರದಲ್ಲಿ ಕಳಪೆ ತೇಪೆ ಕಾಮಗಾರಿ ನಡೆಯುತ್ತಿದೆ ಲಕ್ಷಾಂತರ ಹಣ ಲೂಟಿ ಮಾಡಲಾಗಿದೆ ಎಂದು ನಗರಸಭೆಯ ವಿರೋಧ ಪಕ್ಷದ ನಾಯಕ ಮುನೀರ್ ಅಹ್ಮದ್ ಅರೋಪಿಸಿದರು. ಈ ವೇಳೆ ಬಿಜೆಪಿ ಸದಸ್ಯ ಮಧುರಾಜ್ ಅರಸ್ ಮತ್ತು ಮುನೀರ್ ನಡುವೆ ಮಾತಿನಚಕಮಕಿ ನಡೆಯಿತು. ಏರು ದ್ವನಿಯಲ್ಲಿ ಪರಸ್ಪರ ಇಬ್ಬರೂ ವಾಗ್ವದ ನಡೆಸಿದ್ರು. ಕಾಂಗ್ರೆಸ್ ನ ಎಲ್ಲಾ ಸದಸ್ಯರು ಎದ್ದು ನಿಂತು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಅಧ್ಯಕ್ಷೆ ಸುಜಾತ ನಡೆ ಖಂಡಿಸಿ ತುರ್ತು ಸಭೆಯನ್ನ ರದ್ದು ಮಾಡಿ ಎಂದು ಕಾಂಗ್ರೆಸ್ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಅಲ್ಲಿಯೇ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿ ಸಭಾಂಗಣದಿಂದ ಹೊರನಡೆದರು.

ನಂತರ ನಗರಸಭೆಯ ಮುಂಭಾಗ ಅಜೆಂಡಾ ಪ್ರತಿಯನ್ನ ಹರಿದು ಅಧ್ಯಕ್ಷರ ವಿರುದ್ದ ಘೋಷಣೆ ಕೂಗಿದರು. ಆಡಳಿತ ನಡೆಸುತ್ತಿರುವ ಬಿಜೆಪಿ ಸದಸ್ಯರು ಸಭೆಗೆ ಕೇವಲ 13 ಜನರು ಮಾತ್ರ ಹಾಜರಾಗಿದ್ದು ಬಹುಮತ ಇರದೇ ಬಿಲ್ ಪಾಸ್ ಮಾಡಿದ್ದಾರೆ, ಇದನ್ನ ತಡೆಹಿಡಿಯಲು ಜಿಲ್ಲಾಧಿಕಾರಿಗೆ ದೂರು ನೀಡುತ್ತೇವೆ ಎಂದು ಮುನೀರ್ ಮಾಧ್ಯಮಗಳಿಗೆ ತಿಳಿಸಿದರು. ಇದೇ ವೇಳೆ ಇದಕ್ಕೆ ಉತ್ತರಿಸಿದ ನಗರಸಭಾದ್ಯಕ್ಷೆ ಸುಜಾತ ಶಿವಕುಮಾರ್ ಈ ಹಿಂದಿನ ಸಭೆಯ ನಡುವಳಿಯಂತೆ ಇಂದು ಸಭೆ ನಡೆದಿದೆ. ನಗರದಲ್ಲಿ ಗುಂಡಿ ಮುಚ್ಚುವ ಐವತ್ತು ಲಕ್ಷ ಕಾಮಗಾರಿ ಹೊರತು ಪಡಿಸಿ ಉಳಿದ ಎಲ್ಲ ವಿಷಯಗಳಿಗೆ ಅನುಮೋದನೆ ದೊರೆತಿದೆ ಎಂದರು. ಅದರೇ ಬಹುಮತ ಇಲ್ಲವಲ್ಲ ಎಂಬ ಪ್ರಶ್ನೆಗೆ ತಬ್ಬಿಬ್ಬಾಗಿ ನಾನು ಸದಸ್ಯರ ಸಂಖ್ಯೆ ಎಣಿಕೆ ಮಾಡಿಲ್ಲ. ಹಾಜರಾತಿ ಪುಸ್ತಕ ನೋಡಿ ನಂತರ ಹೇಳುತ್ತೇನೆ ಎಂಬ ಜಾರಿಕೆ ಉತ್ತರ ನೀಡಿದರು

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ ಸುಮಾರು ₹1.70 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನರಸಿಂಹರಾಜಪುರ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ ಫೈನಾನ್ಸ್ ಕಚೇರಿಗೆ ಬೀಗ ಹಾಕಿ ಮಾಲೀಕರು ನಾಪತ್ತೆಯಾಗಿರುವ ಆರೋಪದಡಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...