Home Latest News ಡಿಪೋ ಮ್ಯಾನೇಜರ್ ಚಾರ್ಜ್ ಮನ್ ಅಮಾನತಿಗೆ ಒತ್ತಾಯಿಸಿ ಡಿಎಸ್ಎಸ್, ಪ್ರಗತಿಪರ ಸಂಘಟನೆಗಳ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ
Latest News

ಡಿಪೋ ಮ್ಯಾನೇಜರ್ ಚಾರ್ಜ್ ಮನ್ ಅಮಾನತಿಗೆ ಒತ್ತಾಯಿಸಿ ಡಿಎಸ್ಎಸ್, ಪ್ರಗತಿಪರ ಸಂಘಟನೆಗಳ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ

Share
Share

ಚಿಕ್ಕಮಗಳೂರು :ಕೆ.ಎಸ್.ಆರ್.ಟಿ.ಸಿ. ನಿರ್ವಾಹಕನ ಸಾವಿಗೆ ಹೊಣೆಯಾಗಿರುವ ಡಿಪೋ ಮ್ಯಾನೇಜರ್ ಹಾಗೂ ಚಾರ್ಜ್ ಮ್ಯಾನ್‌ ಅಮಾನತ್ತಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂ ಟ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಒಕ್ಕೂಟದ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ ಸಿಬ್ಬಂದಿ ಗಳ ನಿರ್ಲಕ್ಷ್ಯತನದಿಂದ ನಿರ್ವಾಹಕನ ಸಾವು ಸಂಭವಿಸಿದೆ ಇದರಿಂದ ಆತನ ಕುಟುಂಬ ಅನಾಥವಾಗಿದೆ. ಈ ಸಾವಿಗೆ ಕಾರಣರಾದ ಡಿಪೋ ಮ್ಯಾನೇಜರ್ ಬೇಬಿಬಾಯಿ ಮತ್ತು ಚಾರ್ಜ್ ಮ್ಯಾನ್ ಪರಮೇಶ್ವರಪ್ಪ ಅವರನ್ನು ಕೂಡಲೇ ಅಮಾನತ್ತುಪಡಿಸಬೇಕು ಎಂದು ಒತ್ತಾಯಿಸಿದರು.

ಕಳೆದ ೧೮ ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ. ಇಲಾಖೆಯಲ್ಲಿ ಲಂಚವನ್ನು ನೀಡಿ, ಲಂಚದಿಂದಲೇ ಕಾರ್ಯನಿರ್ವಹಿಸುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾಯಿಸಬೇಕೆಂದು ಅನೇಕ ಹೋರಾಟ ಮುಖಾಂತರ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಮನವಿ ಮಾಡಿದರೂ ಯಾವುದೇ ಕ್ರಮ ವಹಿಸದೇ ಬೇಜವಾಬ್ದಾರಿತನ ತೋರಿದ್ದಾರೆ ಎಂದು ದೂರಿದರು.
ಪ್ರಕರಣಕ್ಕೆ ಸಂಬಂಧ ಕರ್ತವ್ಯ ಲೋಪವೆಸಗಿರುವ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಸಾರಿಗೆ ಇಲಾಖೆಗೆ ಎಚ್ಚರಿಸಿದರೂ ನಿರ್ಲಕ್ಷ್ಯ ಧೋರಣೆ ತೋರಿದ್ದಾರೆ ಎಂದ ಅವರು ಮುಂದೆ ಇನ್ನಷ್ಟು ಚಾಲಕ, ಕಂಡಕ್ಟರ್ ಹಾಗೂ ದುಡಿಯುವ ಕೆಳ ನೌಕರರನ್ನು ಬಲಿಪಡೆಯಲಿದೆ ಎಂಬ ಆತಂಕ ಎದುರಾಗಿದೆ ಎಂದರು.
ಕೂಡಲೇ ಸೇವೆಯಲ್ಲಿ ಲೋಪವೆಸಗಿರುವ ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಿದ್ದಲ್ಲಿ ನಿರಂತರ ಪ್ರತಿ ಭಟನೆಯಲ್ಲಿ ತೊಡಗಿರುವ ಒಕ್ಕೂಟ ಮುಖಂಡರುಗಳು ಹಾಗೂ ಪ್ರಗತಿಪರ ಸಂಘಟನೆಗಳು ಅನಿರ್ದಿಷ್ಟಾ ವಧಿ ಮುಷ್ಕರ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ ಅಮಾಯಕ ಕೆಎಸ್‌ಆರ್‌ಟಿಸಿ ನಿರ್ವಾಹಕ ಶ್ರೀಕಾಂತನ ಸಾವಿನಿಂದ ಆತನ ಕುಟುಂಬ ಕಂಗಾಲಾಗಿದೆ. ಈ ಅಪಘಾತದ ಹೊಣೆಹೊತ್ತಿರುವ ಹಾಗೂ ಸೂಕ್ತ ಸಮಯಕ್ಕೆ ಮೆಕ್ಯಾನಿಕ್ ಕಳಿಸದೇ ಸಾವಿಗೆ ಕಾರಣರಾಗಿರುವ ಕೆ.ಎಸ್.ಆರ್.ಟಿ.ಸಿ. ಮ್ಯಾನೇ ಜರ್, ಚಾರ್ಜ್ ಮ್ಯಾನ್‌ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ಭೀಮ್‌ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್, ರೈತ ಸಂಘದ ಅಧ್ಯಕ್ಷ ಗುರುಶಾಂತಪ್ಪ, ಜಯಕರ್ನಾಟಕದ ಸುನೀಲ್‌ಕುಮಾರ್, ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್ ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ಮತ್ತಿತರರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...

Related Articles

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...

ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ

ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ...

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...