Home Latest News ದಲಿತರ ಪ್ರವೇಶ : ದೇವಸ್ಥಾನದ ಬಾಗಿಲು ಬಂದ್
Latest News

ದಲಿತರ ಪ್ರವೇಶ : ದೇವಸ್ಥಾನದ ಬಾಗಿಲು ಬಂದ್

Share
Share

ಚಿಕ್ಕಮಗಳೂರು : ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಗ್ರಾಮಸ್ಥರು ದೇವಾಲಯದಲ್ಲಿ ಪೂಜೆ ಸಲ್ಲಿಸದೆ ಹಿಂದಿರುಗಿದ ಘಟನೆ ತಾಲೂಕಿನ ಬೆಳವಾಡಿ ಸಮೀಪದ ನರಸೀಪುರ ಗ್ರಾಮದಲ್ಲಿ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ಡಾ.ಸುಮಂತ್, ರಾಜಸ್ವ ನಿರೀಕ್ಷಕರು ಭೇಟಿ ನೀಡಿ ತಿರುಮಲೇಶ್ವರ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ.

ನರಸೀಪುರ ಗ್ರಾಮದಲ್ಲಿ 200 ಕುರುಬ ಸಮುದಾಯದ ಕುಟುಂಬಗಳು ವಾಸವಾಗಿದ್ದರೆ, ಪರಿಶಿಷ್ಟ ಜಾತಿ ಸಮುದಾಯದ 13ರಿಂದ 15 ಕುಟುಂಬದವರು ಮಾತ್ರ ವಾಸಿಸುತ್ತಿದ್ದಾರೆ. ಗ್ರಾಮದ ತಿರುಮಲೇಶ್ವರ ದೇವಸ್ಥಾನಕ್ಕೆ ಹಿಂದಿನಿಂದಲೂ ಪರಿಶಿಷ್ಟ ಜಾತಿಯವರು ಪ್ರವೇಶಿಸುತ್ತಿರಲಿಲ್ಲ ಎನ್ನಲಾಗಿದೆ. ಗ್ರಾಮದ ಪರಿಶಿಷ್ಟ ಜಾತಿ ಇಬ್ಬರು ಯುವಕರು ದೇವಸ್ಥಾನದೊಳಗೆ ಹೋಗುತ್ತೇವೆಂದು ತಹಶೀಲ್ದಾರ್ ಡಾ.ಸುಮಂತ್ ಅವರಿಗೆ ಮನವಿ ಸಲ್ಲಿಸಿದ್ದರು.

ದೇವಸ್ಥಾನದೊಳಗೆ ಪ್ರವೇಶಿಸಲು ನಮ್ಮ ಅಭ್ಯಂತರವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆನ್ನಲಾಗಿದೆ. ಮಂಗಳವಾರ ಪೂಜೆ ನಡೆಯುತ್ತಿದ್ದ ವೇಳೆ ಯುವಕರು ದೇವಸ್ಥಾನದೊಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಕುರುಬ ಸಮುದಾಯದವರು ಪೂಜೆ ಸಲ್ಲಿಸದೆ ಹಿಂದಿರುಗಿದ್ದಾರೆ. ದೇವಸ್ಥಾನ 2012ರಲ್ಲಿ ಮುಜರಾಯಿ ಇಲಾಖೆಗೆ ಸೇರಿದ್ದು, ಹಿಂದಿನಿಂದಲೂ ಪೂಜೆ ಸಲ್ಲಿಸುತ್ತಿದ್ದ ಕುರುಬರು ಪೂಜೆ ಸ್ಥಗಿತಗೊಳಿಸಿ ಮನೆಗೆ ತೆರಳಿದ್ದು, ನಾಳೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಧಾನ ಸಭೆ ಏರ್ಪಡಿಸುವ ಸಾಧ್ಯತೆ ಇದೆ.

Share

Leave a comment

Leave a Reply

Your email address will not be published. Required fields are marked *

Don't Miss

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...

Related Articles

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...

ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ

ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ...

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...