Home Latest News ದತ್ತಮಾಲೆ ಧರಿಸಿದ ಸಿ.ಟಿ ರವಿ : ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭ
Latest News

ದತ್ತಮಾಲೆ ಧರಿಸಿದ ಸಿ.ಟಿ ರವಿ : ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭ

Share
Share

ಚಿಕ್ಕಮಗಳೂರು : ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಮಾನದ ಸಂಭ್ರಮ ಕಳೆ ಕಟ್ಟಲಿದೆ, ದತ್ತಜಯಂತಿ ಹಿನ್ನೆಲೆ ದತ್ತಭಕ್ತರಿಂದ ಇಂದು ಮಾಲಾಧಾರಣೆ ನಡೆಯಿತು. ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ನೂರಾರು ಭಕ್ತರು ಮಾಲಾಧಾರಣೆ ಮಾಡಿದರು

ಮಾಜಿ ಸಚಿವ ಸಿ.ಟಿ.ರವಿ ಕೂಡಾ ಮಾಲೆ ಧರಿಸಿದರು, ಸಿ.ಟಿ.ರವಿ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಸಹಾ ಮಾಲಾಧಾರಣೆ ಮಾಡಿದರು,
100ಕ್ಕೂ ಹೆಚ್ಚು ದತ್ತಭಕ್ತರು ಇಂದಿನಿಂದ ಧಾರ್ಮಿಕ ವಿಧಿ ವಿಧಾನಗಳಲ್ಲಿ ತೊಡಗಲಿದ್ದಾರೆ, ಚಿಕ್ಕಮಗಳೂರು ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಯಲ್ಲೂ ಸಾವಿರಾರು ದತ್ತಭಕ್ತರಿಂದ ಇಂದೇ ಮಾಲಾಧಾರಣೆ ನಡೆಯಲಿದೆ, ಇಂದಿನಿಂದ 9 ದಿನಗಳ ಕಾಲ ವೃತ ಆಚರಿಸಲಿರುವ ದತ್ತಭಕ್ತರು ಭಜನೆ ಕೀರ್ತನೆಯಲ್ಲಿ ತೊಡಗಲಿದ್ದಾರೆ.

ಇದೇ ಡಿಸೆಂಬರ್ 14 ರಂದು ದತ್ತಪೀಠದಲ್ಲಿ ಭಕ್ತರು ದತ್ತಪಾದುಕೆ‌ ದರ್ಶನ ಮಾಡಲಿದ್ದಾರೆ. ಡಿಸೆಂಬರ್ 12 ರಂದು ಅನಸೂಯ ಜಯಂತಿ ಹಾಗೂ 13 ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಬಾರಿಯ ದತ್ತ ಜಯಂತಿಯಲ್ಲಿ 25 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ಪಡೆಯುವ ನಿರೀಕ್ಷೆ ಇದೆ. ಈ ನಡುವೆ ಇಂದಿನಿಂದ 9 ದಿನಗಳ ಕಾಲ ಕಾಫಿನಾಡು ಬೂದಿ ಮುಚ್ಚಿದ ಕೆಂಡವಾಗಲಿರಲಿದೆ. ಆದ್ದರಿಂದ 9 ದಿನಗಳ ಕಾಲ ಜಿಲ್ಲಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಕಲ್ಪಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...