Home Crime News ಬಾವಿಗೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
Crime News

ಬಾವಿಗೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

Share
Share

ಚಿಕ್ಕಮಗಳೂರು :

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ.

ಸೀಮಾ (6), ರಾಧಿಕಾ (2) ಮೃತ ಮಕ್ಕಳಾಗಿದ್ದು ಅಮ್ಮಡಿ ಎಸ್ಟೇಟ್ ನಲ್ಲಿ ಆಟವಾಡಲು ಹೋಗಿದ್ದರು,
ಮಧ್ಯಪ್ರದೇಶ ಮೂಲದ ಸುನೀತಾ ಎಂಬ ಕೂಲಿ ಕಾರ್ಮಿಕರ ಮಕ್ಕಳು ಇವಾರಾಗುದ್ದು ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿದ್ದ ಈ ಕುಟುಂಬ ವಾಸವಿತ್ತು, ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನಿನ್ನೆ ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನ ಕಂಡು ತಾಯಿ ಕಣ್ಣೀರು ಇಡುತ್ತಾ ಹುಡುಕಾಡಿದ ವೇಳೆ ಗಮನಕ್ಕೆ ಬಂದಿದೆ. ಕಾರ್ಮಿಕರು ಕೂಡ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು
ಕೊಪ್ಪ ತಾಲೂಕು ಅಗ್ನಿಶಾಮಕ ದಳ ಸಿಬ್ಬಂದಿಗಳು ದೇಹ ಮೇಲೆತ್ತಲು ಸಹಕರಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...