Home Crime News ಬೆಂಗಳೂರಿನ ಪ್ರವಾಸಿಗರ ವಾಹನ ಪಲ್ಟಿ : ನಾಲ್ವರಿಗೆ ಗಂಭೀರ ಗಾಯ
Crime News

ಬೆಂಗಳೂರಿನ ಪ್ರವಾಸಿಗರ ವಾಹನ ಪಲ್ಟಿ : ನಾಲ್ವರಿಗೆ ಗಂಭೀರ ಗಾಯ

Share
Share

ಚಿಕ್ಕಮಗಳೂರು : ಟೆಂಪೋ ಟ್ರಾವಲರ್ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಪ್ರವಾಸಿಗರ ಟೆಂಪೋ ಟ್ರಾವಲರ್ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಅವರುಗಳನ್ನು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆಯಿಂದ ಹೊರನಾಡಿಗೆ ಸಾಗುವ ರಸ್ತೆಯೂ ತಿರುವುಗಳಿಂದ ಕೂಡಿದ್ದು ಪದೇ ಪದೇ ಪ್ರವಾಸಿಗರ ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...