Home Crime News ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ
Crime News

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ

Share
Share

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂಡಿಗೆರೆ ಮೇಗಲಪೇಟೆಯ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಛೇರಿ ಸುಟ್ಟು ಭಸ್ಮವಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಕಟ್ಟಡದಿಂದ ಹೊಗೆ ಬರುವುದನ್ನು ಕಂಡ ಅಕ್ಕಪಕ್ಕದವರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ನಿರತರಾದರು. ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.

ಬೆಂಕಿ ಇಂದಾಗಿ ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ. ಕೆನರಾ ಬ್ಯಾಂಕ್ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.

ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ

ಕಡೂರು: ಕುಟುಂಬ ಕಲಹ ಹಾಗೂ ಕ್ಷುಲ್ಲಕ ಜಿದ್ದಾಜಿದ್ದಿ ಅಂತಿಮವಾಗಿ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಸಮೀಪದ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ಕೇವಲ ಎರಡು...

Related Articles

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ನಗದು ಕಳವು

ಕೊಪ್ಪ: ಮನೆ ಮಾಲೀಕರು ಇಲ್ಲದ ಸಮಯ ನೋಡಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ...

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...