Home Crime News ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು
Crime News

ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು

Share
Share

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಮರಣ ಮೃದಂಗ ನಿಲ್ಲದಂತಾಗಿದೆ, ಜಮೀನಿನಲ್ಲಿ ವಿದ್ಯುತ್ ತಂತಿ ತಗಲಿ ಕಾಡಾನೆಯೊಂದು ದಾರುಣವಾಗಿ ಸಾವು ಕಂಡಿದೆ. ಜಮೀನಿನಲ್ಲಿ ಕೆಳಭಾಗಕ್ಕೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯಿಂದ ಈ ಅವಘಡ ನಡೆದಿದೆ.

ಆಹಾರ ಅರಿಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಸಾವನ್ನಪ್ಪಿದೆ, ವಿದ್ಯುತ್ ತಂತಿ ತಗಲಿ ಕಂದಕಕ್ಕೆ ಉರುಳಿ ಬಿದ್ದಿರುವ ಒಂಟಿ ಸಲಗ ಅಸುನೀಗಿದೆ, ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದರೂ ಕೂಡ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವೇ ಇರಲಿಲ್ಲ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾನವ ಕಾಡಾನೆಗಳ ಸಂಘರ್ಷ ತೀವ್ರಗೊಂಡಿದೆ, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವು ಕಾಣುತ್ತಿವೆ, ಜಮೀನಿನ ಕೆಲಸಕ್ಕೆ ತೆರಳಿದ ಶಿವಬಸಪ್ಪ ಆನೆಯ ದಾರುಣ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ, ಈ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಳ್ಳಿಯ ಉಡೆವಾ ಗ್ರಾಮದಲ್ಲಿ ನಡೆದಿದೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರು ತಾಲೂಕಿನ ಬಸವರಹಳ್ಳಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಮನಕಲಕುವ ಘಟನೆ ನಡೆದಿದೆ. ಮೂಡಿಗೆರೆ ಕಡೆಗೆ ತೆರಳುತ್ತಿದ್ದ...

Related Articles

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ನಗದು ಕಳವು

ಕೊಪ್ಪ: ಮನೆ ಮಾಲೀಕರು ಇಲ್ಲದ ಸಮಯ ನೋಡಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ...

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...