Home Crime News ಸರಣಿ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ
Crime News

ಸರಣಿ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ

Share
Share

ಚಿಕ್ಕಮಗಳೂರು: ಸರಣಿ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಖದೀಮರನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 18ರ ರಾತ್ರಿ ಬಾಳೆಹೊನ್ನೂರು ಪಟ್ಟಣದ ಮುಬಾರಕ್ ಹುಸೇನ್ ಎಂಬುವವರ ಅಂಗಡಿಯ ಬೀಗ ಮುರಿದು 20 ಸಾವಿರ ನಗದು ಎರಡು ದುಬಾರಿ ಮೌಲ್ಯದ ವಾಚ್ ಹಾಗೂ ಸಿಸಿ ಕ್ಯಾಮರದ ಡಿವಿಆರ್ ಅನ್ನು ಕಳ್ಳರು ಎಗರಿಸಿದ್ದರು. ಅಲ್ಲದೇ ಎದುರುಗಡೆ ಇದ್ದ ಕಲ್ಮಕ್ಕಿ ವೈನ್ ಶಾಪ್ ಬೀಗ ಒಡೆದು ಮೂರು ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕಳವು ಮಾಡಿ, ಮತ್ತೊಂದು ದಿನಸಿ ಅಂಗಡಿಯ ರೋಲಿಂಗ್ ಶೆಟರ್ ಮುರಿದು ಎರಡು ಸಾವಿರ ನಗದು ಎಗರಿಸಿ ಕಳ್ಳರು ಕೈಚಳಕ ತೋರಿದ್ದರು.

ಈ ಕುರಿತು ಅಂಗಡಿ ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಸಿಬ್ಬಂದಿಗಳು, ಚಿತ್ರದುರ್ಗ ಮೂಲದ ಕರುಣ ಹಾಗೂ ಹಸೈನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ 3.50 ಲಕ್ಷ ನಗದು, 4.10 ಲಕ್ಷ ಮೌಲ್ಯದ ವಸ್ತುಗಳು ಸೇರಿದಂತೆ ಮಾರುತಿ ಸ್ವಿಫ್ಟ್ ಕಾರನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ

ಕಡೂರು: ಕುಟುಂಬ ಕಲಹ ಹಾಗೂ ಕ್ಷುಲ್ಲಕ ಜಿದ್ದಾಜಿದ್ದಿ ಅಂತಿಮವಾಗಿ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಸಮೀಪದ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ಕೇವಲ ಎರಡು...

Related Articles

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ನಗದು ಕಳವು

ಕೊಪ್ಪ: ಮನೆ ಮಾಲೀಕರು ಇಲ್ಲದ ಸಮಯ ನೋಡಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ...

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...