Home Latest News ನ್ಯೂ ಇಯರ್ ಪಾರ್ಟಿಗೆ ಹತ್ತು ಹಲವು ಕಂಡಿಷನ್ಸ್ : ಎಸ್ಪಿ ವಿಕ್ರಮ್ ಅಮಟೆ ಮಾಹಿತಿ
Latest News

ನ್ಯೂ ಇಯರ್ ಪಾರ್ಟಿಗೆ ಹತ್ತು ಹಲವು ಕಂಡಿಷನ್ಸ್ : ಎಸ್ಪಿ ವಿಕ್ರಮ್ ಅಮಟೆ ಮಾಹಿತಿ

Share
Share

ಚಿಕ್ಕಮಗಳೂರು : ಹೊಸವರ್ಷ ಆಚರಣೆ ಸಂಬಂಧ ಅಹಿತಕರ ಘಟನೆಗಳು ಸಂಭವಿಸದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಡಿ.31 ರ ಸಂಜೆ 6 ಗಂಟೆಯಿಂದ ಜ.1ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣಗಳಿಗೆ ಹೋಗುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ತಿಳಿಸಿದರು.

ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನೂತನ ವರ್ಷಾಚರಣೆ ಹಿನ್ನೆಲೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಆಯಾಕಟ್ಟಿನ ಸ್ಥಳಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡ ಲಾಗಿದೆ. ಪ್ರಸಿದ್ಧ ಪ್ರವಾಸಿ ಕೇಂದ್ರಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ, ಝರಿಫಾಲ್ಸ್ ಸೇರಿದಂತೆ ಇತರೆ ಕಡೆಗಳಲ್ಲಿ ಮಧ್ಯಪಾನ ಮಾಡುವುದು, ಅಸಭ್ಯವಾಗಿ ವರ್ತಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿರ್ಬಂಧವನ್ನು ವಿಧಿಸಲಾಗಿದೆ ಎಂದರು.
ನೂತನ ವರ್ಷಾಚರಣೆ ಸಂದರ್ಭದಲ್ಲಿ ಏನೇನು ಕ್ರಮಗಳನ್ನು ಕೈಗೊಳ್ಳಬೇಕೆಂದು ರೆಸಾರ್ಟ್, ಹೋಮ್‌ಸ್ಟೇ ಮಾಲೀಕರು, ಲಾಡ್ಜ್, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಸಭೆ ನಡೆಸಿ ತಿಳುವಳಿಕೆ ನೀಡಲಾಗಿದೆ. ನ್ಯಾಯಾಲಯದ ಆದೇಶದಂತೆ ರಾತ್ರಿ ೧೦ಗಂಟೆ ನಂತರ ಸಾರ್ವಜನಿಕವಾಗಿ ಸೌಂಡ್‌ಸಿಸ್ಟಮ್ ಬಳಕೆ ಮಾಡುವಂತಿಲ್ಲ. ಪಟಾಕಿ ಸಿಡಿಸು ವಂತಿಲ್ಲ. ಇವೆಂಟ್‌ಗಳನ್ನು ಆಯೋಜನೆ ಮಾಡುವ ಹೋಮ್ ಸ್ಟೇ, ರೆಸಾರ್ಟ್ ಮಾಲೀಕರು ಇಲಾಖೆಯ ಪರವಾನಿಗೆ ಪಡೆದು ಕೊಳ್ಳುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಸಂಭ್ರಮಾಚರಣೆ ಸಂದರ್ಭದಲ್ಲಿ ರೇವ್ ಪಾರ್ಟಿ ಹಾಗೂ ಡ್ರಗ್ ಸೇವನೆ ಪ್ರಕರಣಗಳು ಕಂಡು ಬಂದರೇ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
ಕುಡಿದು ವಾಹನ ಚಲಾಯಿಸುವರು, ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕುಡಿದು ವಾಹನ ಚಲಾಯಿಸುವರ ಹಾಗೂ ಬೈಕ್ ವಿಲಿಂಗ್ ಮಾಡುವವರು, ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಅತೀ ವೇಗದಲ್ಲಿ ಚಲಾಯಿಸುವರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಆಯಾಕಟ್ಟಿನ ಪ್ರದೇಶದಲ್ಲಿ ತೀವ್ರ ತಪಾಸಣೆ ಒಳಪಡಿಸಲಾಗುವುದು. ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಎಚ್ಚರಿಕೆ ನೀಡಿ ದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...